ADVERTISEMENT

ರಾಜಕೀಯ ಬದಿಗೊತ್ತಿ ಅಭಿವೃದ್ಧಿಗೆ ಒತ್ತು: ವಿ.ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 6 ಜುಲೈ 2024, 14:20 IST
Last Updated 6 ಜುಲೈ 2024, 14:20 IST
<div class="paragraphs"><p>ಗುಬ್ಬಿ ತಾಲ್ಲೂಕಿನ ಹೊರವಲಯದ ಹೇರೂರಿನಲ್ಲಿ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ವಿ ಸೋಮಣ್ಣ ಹಾಗೂ ಮಾಜಿ ಸಂಸದ ಜಿ.ಎಸ್ ಬಸವರಾಜು ಮತ್ತು ಇತರರು </p></div>

ಗುಬ್ಬಿ ತಾಲ್ಲೂಕಿನ ಹೊರವಲಯದ ಹೇರೂರಿನಲ್ಲಿ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ವಿ ಸೋಮಣ್ಣ ಹಾಗೂ ಮಾಜಿ ಸಂಸದ ಜಿ.ಎಸ್ ಬಸವರಾಜು ಮತ್ತು ಇತರರು

   

ಗುಬ್ಬಿ: ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬದಿಗೊತ್ತಿ ಎಲ್ಲರನ್ನು ಪರಿಗಣನೆ ತೆಗೆದುಕೊಂಡು ಮತದಾರರ ಋಣ ತೀರಿಸಲು ಬದ್ಧನಾಗಿದ್ದಾನೆ ಎಂದು ಕೇಂದ್ರ ರೈಲ್ವೆ ಖಾತೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.

ಶನಿವಾರ ಪಟ್ಟಣದ ಹೊರವಲಯದ ಹೇರೂರಿನಲ್ಲಿ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ADVERTISEMENT

ಜಿಲ್ಲೆಯಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿರುವುದರಿಂದ ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ಅನುಕೂಲಕರವಾದ ವಾತಾವರಣ ಇದೆ. ಗುಬ್ಬಿ ತಾಲ್ಲೂಕಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆ ಹಾಗೂ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವುದಾಗಿ ತಿಳಿಸಿದರು.

ಮುಖಂಡರಾದ ಎಸ್.ಡಿ ದಿಲೀಪ್ ಕುಮಾರ್ ಹಾಗೂ ಬೆಟ್ಟಸ್ವಾಮಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿಎಸ್ ವತಿಯಿಂದ ಸಚಿವರನ್ನು ಅಭಿನಂದಿಸಲಾಯಿತು. ಕೆಎಂಎಫ್ ನಿರ್ದೇಶಕ ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪ್ರಭಾಕರ್ ಸಚಿವರಿಗೆ ಬೆಳ್ಳಿಗದೆ ನೀಡಿ ಸನ್ಮಾನಿಸಿದರು.

ಫೋಟೋ 02ಸುದ್ದಿ 01: ಕೇಂದ್ರ ಸಚಿವ ವಿ ಸೋಮಣ್ಣ ರವರನ್ನು ತಾಲ್ಲೂಕಿನ ಎನ್ ಡಿ ಎ ಕಾರ್ಯಕರ್ತರು ಸನ್ಮಾನಿಸಿದರು.

ಮಾಜಿ ಸಂಸದ ಜಿ.ಎಸ್ ಬಸವರಾಜು, ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿಶಂಕರ್, ತಾಲ್ಲೂಕು ಘಟಕದ ಅಧ್ಯಕ್ಷ ಪಂಚಾಕ್ಷರಿ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಚಿಕ್ಕವೀರಯ್ಯ, ಬಿಜೆಪಿ ಪಟ್ಟಣ ಪಂಚಾಯಿತಿ ಸದಸ್ಯರು, ಮುಖಂಡರಾದ ಬಿ.ಎಸ್ ನಾಗರಾಜು, ಕಳ್ಳಿಪಾಳ್ಯ ಲೋಕೇಶ್, ಬೈರಪ್ಪ, ನಂಜೇಗೌಡ, ಹುಚ್ಚಪ್ಪ, ಹೊನ್ನಗಿರಿಗೌಡ, ವಿಜಯಕುಮಾರ್, ಸುರೇಶ್ ಗೌಡ, ಸಿದ್ದಗಂಗಮ್ಮ, ಬ್ಯಾಟರಂಗೇಗೌಡ, ಹಿತೇಶ್, ಅ.ನ ಲಿಂಗಪ್ಪ, ಚಂದ್ರಶೇಖರ ಬಾಬು ಹಾಗೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.