ADVERTISEMENT

ಮಗನಿಗೆ ಬೈಕ್‌ ನೀಡಿ ಅಪಘಾತದಲ್ಲಿ ಆತನನ್ನು ಕಳೆದುಕೊಂಡಿದ್ದ ತಂದೆಗೆ ಜೈಲು ಶಿಕ್ಷೆ!

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 5:53 IST
Last Updated 26 ಫೆಬ್ರುವರಿ 2026, 5:53 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಗುಬ್ಬಿ: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರವಾಹನ ನೀಡಿ ಅಪಘಾತಕ್ಕೆ ಕಾರಣವಾಗಿದ್ದ ತಂದೆ ನಾಗೇಂದ್ರ ಕುಮಾರ್ ಅವರಿಗೆ ನ್ಯಾಯಾಧೀಶೆ ಅನುಪಮಾ ಡಿ ಅವರು ₹25 ಸಾವಿರ ದಂಡ ಹಾಗೂ ಒಂದು ದಿನದ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ADVERTISEMENT

2024ರಲ್ಲಿ ಪಟ್ಟಣದಲ್ಲಿ ಬೈಕ್ ಹಾಗೂ ಬಸ್ ನಡುವೆ ನಡೆದಿದ್ದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್‌ ಪರ ಅಕ್ಷತಾ ವಿಶ್ವನಾಥ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.