ಕುಣಿಗಲ್: ಚಿಕ್ಕನಾಯಕನಹಳ್ಳಿಯಿಂದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಇಬ್ಬರು ಬಾಲಕಿಯರು ಕುಣಿಗಲ್‌ನಲ್ಲಿ ಪತ್ತೆಯಾಗಿದ್ದು, ಪೋಲಿಸರು ಬುಧವಾರ ರಾತ್ರಿ ಪೋಷಕರ ವಶಕ್ಕೆ ನೀಡಿದ್ದಾರೆ.
ಕಾರಣಾಂತರಗಳಿಂದ ಮನೆ ತೊರೆದಿದ್ದ ಬಾಲಕಿಯರು ತಮ್ಮ ಬಳಿ ಇದ್ದ ಆಧಾರ ಕಾರ್ಡ್ ಬಳಸಿ ಸರ್ಕಾರಿ ಬಸ್‌ನಲ್ಲಿ ಸಂಚರಿಸುತ್ತ, ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾಗ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕರೆತಂದು ಪೋಷಕರ ವಶಕ್ಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.