ADVERTISEMENT

ರೈತರಿಗೂ ಪ್ಯಾಕೇಜ್ ಘೋಷಿಸಿ: ಶಾಸಕ ಡಿ.ಸಿ.ಗೌರಿಶಂಕರ್

​ಪ್ರಜಾವಾಣಿ ವಾರ್ತೆ
Published 7 ಮೇ 2020, 12:16 IST
Last Updated 7 ಮೇ 2020, 12:16 IST
ಡಿ.ಸಿ.ಗೌರಿಶಂಕರ್
ಡಿ.ಸಿ.ಗೌರಿಶಂಕರ್   

ತುಮಕೂರು: ಕೊರೊನಾ ಸಂಕಷ್ಟಕ್ಕೆ ಒಳಗಾಗಿದ್ದ ಹೂ ಬೆಳೆಗಾರರು, ಮಡಿವಾಳ, ಸವಿತಾ ಸಮಾಜ, ಆಟೊ, ಟ್ಯಾಕ್ಸಿ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿರುವ ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ ಎಂದು ಶಾಸಕ ಡಿ.ಸಿ.ಗೌರಿಶಂಕರ್ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‍ಡೌನ್ ಘೋಷಣೆಯಾದ ದಿನದಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಳೆ ಮಾರಾಟವಾಗಿಲ್ಲ. ಸೂಕ್ತ ಬೆಲೆಯೂ ಸಿಕ್ಕಿಲ್ಲ. ಈ ಕಾರಣದಿಂದ ಕಷ್ಟಕ್ಕೆ ತುತ್ತಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ಕೈಹಿಡಿಯಬೇಕಾದ ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡದೆ ನಿರಾಸೆ ಮೂಡಿಸಿದೆ ಎಂದರು.

ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಬೆಳೆ ಸಾಲಮನ್ನಾ ಮಾಡಿದಂತೆ ಈಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಬೆಳೆ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ಜಿಲ್ಲಾಧಿಕಾರಿ ಜಿಲ್ಲೆಯ ಎಲ್ಲ ಶಾಸಕರ ಸಭೆ ನಡೆಸಿ ಆಯಾ ತಾಲ್ಲೂಕಿನಲ್ಲಿ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಇದುವರೆಗೂ ಯಾರಿಗೂ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.