ADVERTISEMENT

ಭೂಬಾಲನ್ ಮುಂದುವರಿಕೆ; ಶಾಸಕರಿಂದ ಸಿ.ಎಂಗೆ ಪತ್ರ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 13:16 IST
Last Updated 24 ಸೆಪ್ಟೆಂಬರ್ 2019, 13:16 IST

ತುಮಕೂರು: ಬೆಳಗಾವಿಗೆ ವರ್ಗಾವಣೆ ಆಗಿರುವ ಟಿ.ಭೂಬಾಲನ್ ಅವರನ್ನು ಮಹಾನಗರ ಪಾಲಿಕೆ ಆಯುಕ್ತರಾಗಿ ಮರು ನೇಮಕ ಮಾಡಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಭೂಬಾಲನ್‌ ಪಾಲಿಕೆ ಆಯುಕ್ತರಾಗಿ ಹಾಗೂ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಅವರ ವರ್ಗಾವಣೆಯಿಂದ ತುಮಕೂರು ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ಆಡಚಣೆ ಉಂಟಾಗುತ್ತದೆ. ಸಾರ್ವಜನಿಕವಾಗಿ ಉತ್ತಮ ಅಭಿಪ್ರಾಯ ಹೊಂದಿರುವ ಆಯುಕ್ತರ ಸೇವೆ ನನ್ನ ಕ್ಷೇತ್ರಕ್ಕೆ ಅವಶ್ಯವಾಗಿದೆ.

ಮುಂದಿನ ತಿಂಗಳು ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಸರ್ಕಾರವು ಬೆಳಗಾವಿಯ ಮಲಪ್ರಭಾ‌‌-ಘಟಪ್ರಭಾ ಯೋಜನೆಯ ವಿಶೇಷ ಜಿಲ್ಲಾಧಿಕಾರಿ ಹಾಗೂ ಗೋಕಾಕ್ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯನ್ನಾಗಿ ನೇಮಿಸಿದೆ. ಚುನಾವಣೆ ನಂತರ ಅವರನ್ನು ಮಹಾನಗರ ಪಾಲಿಕೆ ಆಯುಕ್ತರಾಗಿ ಮತ್ತೆ ನೇಮಿಸಬೇಕು ಎಂದು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.