ADVERTISEMENT

ರಸ್ತೆ ವಿಸ್ತರಣೆಗೆ ಶಾಸಕರ ಗಡುವು

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಮಸಾಲ ಜಯರಾಂ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 2:26 IST
Last Updated 21 ಜನವರಿ 2021, 2:26 IST
ತುರುವೇಕೆರೆಯ ತಾ.ಪಂ. ಸಭಾಂಗಣದಲ್ಲಿ ಶಾಸಕ ಮಸಾಲ ಜಯರಾಂ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು
ತುರುವೇಕೆರೆಯ ತಾ.ಪಂ. ಸಭಾಂಗಣದಲ್ಲಿ ಶಾಸಕ ಮಸಾಲ ಜಯರಾಂ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು   

ತುರುವೇಕೆರೆ: ‘ಪಟ್ಟಣದ ದಬ್ಬೇಘಟ್ಟ ರಸ್ತೆ ವಿಸ್ತರಣೆಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸೂಚಿಸಿ ವರ್ಷವೇ ಕಳೆದರೂ ಬೇಜವಾಬ್ದಾರಿ ತೋರಿದ್ದೀರಿ’ ಎಂದು ಶಾಸಕ ಮಸಾಲಜಯರಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಶಾಸಕ ಮಸಾಲಾ ಜಯರಾಂ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದರು.

ರಸ್ತೆ ಮಧ್ಯಭಾಗದಿಂದ 12.5 ಮೀಟರ್ ತೆರವುಗೊಳಿಸಲು ಫೆಬ್ರುವರಿ 10ಕ್ಕೆ ಗಡುವು ನೀಡಿದರು. ಒತ್ತುವರಿದಾರರಿಗೆ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ADVERTISEMENT

ಬೇಸಿಗೆ ಆರಂಭವಾಗುತ್ತಿದ್ದು, ಕುಡಿಯುವ ನೀರಿನ ಕೊರತೆ, ಚಿರತೆ ಹಾವಳಿ, ತೆಂಗಿಗೆ ತಗಲಿರುವ ಕೀಟಬಾಧೆ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕರು ಚರ್ಚಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣ ಹಾಳಾಗಿದೆ. ಹಲವು ಬಾರಿ ಕಾಮಗಾರಿ ನೆಪದಲ್ಲಿ ಹಣ ಪೋಲು ಮಾಡಲಾಗಿದೆ. ಆದರೂ ಕ್ರೀಡಾಂಗಣ ಸಾರ್ವಜನಿಕರ ಬಳಕೆಗೆ ಬರುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಶಾಸಕರು ಎಚ್ಚರಿಸಿದರು.

ಸಭೆಯಲ್ಲಿ ತಾ.ಪಂ.ಅಧ್ಯಕ್ಷೆ ನಾಗರತ್ನ, ಉಪಾಧ್ಯಕ್ಷ ಟಿ.ಭೈರಪ್ಪ, ತಹಶೀಲ್ದಾರ್ ಆರ್.ನಯೀಂಉನ್ನಿಸ್ಸಾ, ಇ.ಒ. ಜಯಕುಮಾರ್, ಗುಬ್ಬಿ ಇ.ಒ.ನರಸಿಂಹಯ್ಯ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.