ADVERTISEMENT

ಜನ್ಮದಿನ ಆಚರಣೆ ಪ್ರಕರಣ: ಶಾಸಕ ಮಸಾಲ ಜಯರಾಮ್ ಬೆಂಬಲಿಗರ ವಿರುದ್ಧ ಎಫ್‌ಐಆರ್

ಮೂವರು ಪೊಲೀಸರಿಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 15:06 IST
Last Updated 11 ಏಪ್ರಿಲ್ 2020, 15:06 IST
ಇಡಗೂರಿನಲ್ಲಿ ಜನ್ಮದಿನ ಆಚರಿಸಿಕೊಂಡಿದ್ದ ಶಾಸಕ ಮಸಾಲ ಜಯರಾಮ್
ಇಡಗೂರಿನಲ್ಲಿ ಜನ್ಮದಿನ ಆಚರಿಸಿಕೊಂಡಿದ್ದ ಶಾಸಕ ಮಸಾಲ ಜಯರಾಮ್   

ಗುಬ್ಬಿ: ತುರುವೇಕೆರೆ ಶಾಸಕ ಮಸಾಲ ಜಯರಾಮ್ ಜನ್ಮದಿನದ ಕಾರ್ಯಕ್ರಮ ಆಯೋಜಿಸಿದ್ದ ಇಡಗೂರು ರವಿ, ರಾಜೇನಹಳ್ಳಿ ವಸಂತ ಕುಮಾರ ಹಾಗೂ ಹೊನ್ನೇಗೌಡ ಮತ್ತು ಇತರರ ವಿರುದ್ಧ ತಾಲ್ಲೂಕಿನ ಸಿ.ಎಸ್.ಪುರ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮೂವರು ಶಾಸಕರ ಬೆಂಬಲಿಗರಾಗಿದ್ದಾರೆ. ಲಾಕ್‌ಡೌನ್ ನಡುವೆಯೇ ಸಿ.ಎಸ್.ಪುರ ಹೋಬಳಿಯ ಇಡಗೂರು ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಶಾಸಕರ ಜನ್ಮದಿನದ ಕಾರ್ಯಕ್ರಮ ಆಯೋಜಿಸಿದ್ದರು. ಸಾಮಾಜಿಕ ಅಂತರ ಕಾಯ್ದುಕೊಳ್ಳದೆಯೇ ಶಾಸಕರು ಜನರಿಗೆ ಬರಿಯಾನಿ ಊಟ ಬಡಿಸಿದ್ದರು.

ಕಾರ್ಯಕ್ರಮದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಹರಿದಾಡಿದ್ದವು. ಶಾಸಕರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿತ್ತು. ಪೊಲೀಸರು ಸ್ಥಳದಲ್ಲಿ ಹಾಜರಿದ್ದರೂ ಕ್ರಮಕೈಗೊಳ್ಳದಿರುವ ಬಗ್ಗೆಯೂ ಅಸಮಾಧಾನ ವ್ಯಕ್ತವಾಗಿತ್ತು.

ADVERTISEMENT

ಮೂವರು ಪೊಲೀಸರಿಗೆ ನೋಟಿಸ್: ಸಿ.ಎಸ್.ಪುರ ಠಾಣೆ ಸಬ್‌ಇನ್‌ಸ್ಪೆಕ್ಟರ್ ನಾಗರಾಜು, ಬೀಟ್ ಕಾನ್‌ಸ್ಟೆಬಲ್ ಹಾಗೂ ಹೆಡ್‌ಕಾನ್‌ಸ್ಟೆಬಲ್‌ಗೆ ಕಾರಣ ಕೇಳಿ ಈಗಾಗಲೇ ನೋಟಿಸ್ ನೀಡಲಾಗಿದೆ. ಅವರು ನೀಡುವ ಉತ್ತರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಳುಹಿಸಲಾಗುವುದು ಎಂದು ಸರ್ಕಲ್ ಇನ್‌ಸ್ಪೆಕ್ಟರ್ ರಾಮಕೃಷ್ಣಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.