
ಶಿರಾ: ತಾಲ್ಲೂಕಿಗೆ ಮುಂದಿನ ಶೈಕ್ಷಣಿಕ ಸಾಲಿಗೆ ಎರಡು ವಸತಿ ಶಾಲೆಗಳು ಮಂಜೂರಾಗಲಿದೆ. ಕಳ್ಳಂಬೆಳ್ಳ ಮತ್ತು ಕಸಬಾ ಹೋಬಳಿಯಲ್ಲಿ ಪ್ರಾರಂಭಿಸುವುದಾಗಿ ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ತಾಲ್ಲೂಕಿನ ಪಟ್ಟನಾಯಕನಹಳ್ಳಿ ಶಾಂತಿನಿಕೇತನ ಸಂಸ್ಥೆ ಬೆಳ್ಳಿಹಬ್ಬ ಸಂಭ್ರಮಾಚರಣೆ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಅನೇಕ ಸವಾಲುಗಳನ್ನು ಮೆಟ್ಟಿ ನಿಂತು ಉತ್ತಮ ಶೈಕ್ಷಣಿಕ ಸಂಸ್ಥೆಯಾಗಿ ಶಾಂತಿನಿಕೇತನ ಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.
ನಾದೂರು ಗ್ರಾ.ಪಂ ಅಧ್ಯಕ್ಷೆ ತುಳಸಿ ಮಧುಸೂದನ್ ಮಾತನಾಡಿ, ಸಂಸ್ಥೆಯು ಆರಂಭದಿಂದಲೂ ಉತ್ತಮ ಶಿಕ್ಷಣ ನೀಡಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ100ರಷ್ಟು ಫಲಿತಾಂಶವನ್ನು ದಾಖಲಿಸುತ್ತಾ ಹೊಸದೊಂದು ದಾಖಲೆ ನಿರ್ಮಿಸಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಗುರುಮೂರ್ತಿ ಗೌಡ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಡಳಿತ ವೈದ್ಯಾಧಿಕಾರಿ ಡಾ.ಡಿ.ಎಂ.ಗೌಡ, ನಿವೃತ್ತ ಪ್ರಾಂಶುಪಾಲ ಪಿ.ಎಚ್.ಮಹೇಂದ್ರಪ್ಪ, ಸಂಸ್ಥೆ ಅಧ್ಯಕ್ಷ ಬಿ.ಪಿ.ಪಾಂಡುರಂಗಯ್ಯ, ಕಾರ್ಯದರ್ಶಿ ರೇಣುಕಮ್ಮ, ಮುಖ್ಯ ಶಿಕ್ಷಕಿ ಪ್ರತಿಭಾ, ಪ್ರಿಯಾಂಕ, ಪ್ರಜ್ವಲ್, ವಿದ್ಯಾಕೀರ್ತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.