ತುಮಕೂರು: ತಾಲ್ಲೂಕಿನ ದೇವರಾಯನದುರ್ಗದ ಬಳಿ ಪ್ರವಾಸಿಗರಿಗೆ ಡ್ರ್ಯಾಗರ್ ತೋರಿಸಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದ ಬಿ.ಎಸ್.ಪುನೀತ್ ಎಂಬಾತನಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
2020ರ ಡಿ. 18ರಂದು ಅಮಿತ್, ದಿಲೀಪ್ ಚೌದರಿ ಎಂಬುವರು ದೇವರಾಯನದುರ್ಗದ ಬಳಿ ಫೋಟೊ ತೆಗೆದುಕೊಳ್ಳುತ್ತಿದ್ದರು. ಇದೇ ಸಮಯದಲ್ಲಿ ಅಲ್ಲಿಗೆ ಬಂದ ಪುನೀತ್ ಮತ್ತು ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕ ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ್ದರು. ಪುನೀತ್ ದಿಲೀಪ್ ಕುತ್ತಿಗೆ ಬಳಿ ಡ್ರ್ಯಾಗರ್ ಇಟ್ಟು ಮೊಬೈಲ್ ಕಿತ್ತುಕೊಂಡಿದ್ದ. ಈ ಕುರಿತು ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಜಯಂತಕುಮಾರ್ ವಾದ–ಪ್ರತಿವಾದ ಆಲಿಸಿ ಆರೋಪ ಸಾಬೀತಾದ ಕಾರಣ ಪುನೀತ್‌ಗೆ ಶಿಕ್ಷೆ ವಿಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.