ADVERTISEMENT

ತುಮಕೂರು | ಮೋದಿ ಜನ್ಮದಿನ: ಆರೋಗ್ಯ ಶಿಬಿರ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 5:46 IST
Last Updated 18 ಸೆಪ್ಟೆಂಬರ್ 2025, 5:46 IST
ತುಮಕೂರು ರೈಲು ನಿಲ್ದಾಣದ ಬಳಿ ಬುಧವಾರ ಕೇಂದ್ರ ಸಚಿವ ವಿ.ಸೋಮಣ್ಣ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು
ತುಮಕೂರು ರೈಲು ನಿಲ್ದಾಣದ ಬಳಿ ಬುಧವಾರ ಕೇಂದ್ರ ಸಚಿವ ವಿ.ಸೋಮಣ್ಣ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು   

ತುಮಕೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ 75ನೇ ಜನ್ಮ ದಿನದ ಪ್ರಯುಕ್ತ ನಗರದ ವಿವಿಧೆಡೆ ಬುಧವಾರ ಬಿಜೆಪಿ ಹಾಗೂ ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಹಲವು ಕಾರ್ಯಕ್ರಮಗಳು ನಡೆದವು.

ನಗರದ ಕ್ಯಾತ್ಸಂದ್ರ ಸರ್ಕಾರಿ ಶಾಲೆಯಲ್ಲಿ ಸೋಮಣ್ಣ ಮಕ್ಕಳಿಗೆ ಪುಸ್ತಕ ವಿತರಿಸಿದರು. ನಂತರ ರೈಲು ನಿಲ್ದಾಣಕ್ಕೆ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡು ‘ಸ್ವಚ್ಛೋತ್ಸವ’ಕ್ಕೆ ಚಾಲನೆ ನೀಡಿದರು. ಅಂಧರು, ಅಂಗವಿಕಲರಿಗೆ ಅಗತ್ಯ ಪರಿಕರ ವಿತರಿಸಿ, 20 ಮಂದಿ ಸ್ವಚ್ಛತಾ ಸಿಬ್ಬಂದಿಯನ್ನು ಗೌರವಿಸಿದರು.

ಸಂಸದರ ಕಚೇರಿ ಆವರಣದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. 75 ಸಾಧಕರನ್ನು ಸನ್ಮಾನಿಸಲಾಯಿತು. ಪಿಎಂ ವಿಶ್ವಕರ್ಮ ಯೋಜನೆ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು.

ADVERTISEMENT

ಮಾಜಿ ಸಂಸದ ಜಿ.ಎಸ್.ಬಸವರಾಜು, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕರಾದ ಡಾ.ಎಂ.ಆರ್.ಹುಲಿನಾಯ್ಕರ್, ಎಂ.ಡಿ.ಲಕ್ಷ್ಮಿನಾರಾಯಣ, ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜನಪ್ಪ, ಮುಖಂಡರಾದ ಎಸ್.ಪಿ.ಚಿದಾನಂದ್, ವೈ.ಎಚ್.ಹುಚ್ಚಯ್ಯ, ಧನಿಯಾಕುಮಾರ್, ಮಲ್ಲಸಂದ್ರ ಶಿವಣ್ಣ, ಟಿ.ಜೆ.ಗಿರೀಶ್, ಕರಣಂ ರಮೇಶ್‌, ಕೆ.ಎಸ್.ಸಿದ್ಧಲಿಂಗಪ್ಪ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್‌ ಕುಮಾರ್‌ ಸಿಂಗ್, ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್‌ ಕುರಿಯಾ ಮೊದಲಾದವರು ಪಾಲ್ಗೊಂಡಿದ್ದರು.

ಬಿಜೆಪಿ ಜಿಲ್ಲಾ ಘಟಕದಿಂದ ವಿಶ್ವವಿದ್ಯಾಲಯದ ಮುಂಭಾಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 83 ಯೂನಿಟ್‍ ರಕ್ತ ಸಂಗ್ರಹಿಸಲಾಯಿತು.

ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್‌, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್‌, ಮುಖಂಡರಾದ ಟಿ.ಕೆ.ಧನುಷ್‌, ಎಂ.ಅಂಬಿಕಾ, ಗಂಗರಾಜು, ಎಚ್.ಎಂ.ರವೀಶಯ್ಯ, ಟಿ.ಎಚ್.ಹನುಮಂತರಾಜು, ನವಚೇತನ್, ಕೆ.ವೇದಮೂರ್ತಿ, ಸುಮಿತ್ರಮ್ಮ, ಲೋಕೇಶ್, ಬಿ.ಜಿ.ಕೃಷ್ಣಪ್ಪ, ಸಿ.ಎನ್.ರಮೇಶ್, ಮಲ್ಲಿಕಾರ್ಜುನ್, ಪುಟ್ಟರಾಜು, ಮನೋಹರಗೌಡ, ಮಂಜುನಾಥ್, ಎಸ್‌.ಡಿ.ದಿಲೀಪ್‍ಕುಮಾರ್, ಸತ್ಯಮಂಗಲ ಜಗದೀಶ್‌ ಇತರರು ಹಾಜರಿದ್ದರು.

ತುಮಕೂರಿನಲ್ಲಿ ಬುಧವಾರ ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಬಿಜೆಪಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಶಾಸಕ ಬಿ.ಸುರೇಶ್‌ಗೌಡ ರಕ್ತದಾನ ಮಾಡಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್‌ ಮುಖಂಡರಾದ ಅಂಬಿಕಾ ಹುಲಿನಾಯ್ಕರ್ ಬಿ.ಜಿ.ಕೃಷ್ಣಪ್ಪ ಸಿ.ಎನ್.ರಮೇಶ್ ಮಲ್ಲಿಕಾರ್ಜುನ್‌ ಮೊದಲಾದವರು ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.