ADVERTISEMENT

ಸ್ಕಿಮ್ಮಿಂಗ್ ಸಾಧನದಿಂದ ಹಣ ವಂಚನೆ: ಉಗಾಂಡಾ, ಕೀನ್ಯಾದ ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 7:24 IST
Last Updated 11 ಡಿಸೆಂಬರ್ 2020, 7:24 IST
   

ತುಮಕೂರು: ಸ್ಕಿಮ್ಮಿಂಗ್ ಸಾಧನದ ಮೂಲಕ ಎಟಿಎಂ ಕೇಂದ್ರಗಳಲ್ಲಿ ಹಣ ಡ್ರಾ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೆಹಲಿಯ ವಾಸಿಗಳಾದ ಉಗಾಂಡಾದ ಐವಾನ್ ಕಾಬೊಂಗೆ ಮತ್ತು ಕೀನ್ಯಾದ ಲಾರೆನ್ಸ್ ಮಾಕಾಮು ನನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

ಈ ಇಬ್ಬರು ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ತಾಲ್ಲೂಕಿನ 42 ಮತ್ತು ಗುಬ್ಬಿ ತಾಲ್ಲೂಕಿನಲ್ಲಿ ಎರಡು ಹಾಗೂ ತುಮಕೂರು ತಾಲ್ಲೂಕಿನಲ್ಲಿ 42 ಪ್ರಕರಣಗಳು ದಾಖಲಾಗಿದ್ದವು.

ADVERTISEMENT

ವಂಚಕರು ಚೆನ್ನೈ, ಮುಂಬೈ, ತಮಿಳುನಾಡು ಸೇರಿದಂತೆ ವಿವಿಧ ಕಡೆಗಳ ಎಟಿಎಂ ಕೇಂದ್ರಗಳಿಂದ ಹಣವನ್ನು ಡ್ರಾ ಮಾಡಿದ್ದರು.

ಆರೋಪಿಗಳಿಂದ 20 ನಕಲಿ ಎಟಿಎಂ ಕಾರ್ಡ್ ಗಳು, ಸ್ಕಿಮ್ಮಿಂಗ್ ಸಾಧನ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಿಗೆ ನವದೆಹಲಿಯಲ್ಲಿ ವಾಸಿಗಳಾಗಿರುವ ಆಫ್ರಿಕಾದ ಜೇಮ್ಸ್ ಸೌತ್ ಮತ್ತು ಜುಯತ್ ಎಂಬುವವರು ನೆರವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯಿಂದ ಇಲ್ಲಿಗೆ ಏಕೆ ಬಂದರು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಮತ್ತಷ್ಟು ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ನೀಡಿದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.