ADVERTISEMENT

2 ತಿಂಗಳಲ್ಲಿ ಸ್ಮಶಾನ ವ್ಯವಸ್ಥೆ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 17:02 IST
Last Updated 10 ಸೆಪ್ಟೆಂಬರ್ 2020, 17:02 IST

ತುಮಕೂರು:ಜಿಲ್ಲೆಯಲ್ಲಿ ಒಟ್ಟು 333 ಗ್ರಾಮಗಳಲ್ಲಿ ಸ್ಮಶಾನ ಅವಶ್ಯಕತೆಯಿದೆ. ಮುಂದಿನ 2 ತಿಂಗಳೊಳಗಾಗಿ ವ್ಯವಸ್ಥೆ ಕಲ್ಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾತಿಗಳಿಗೆ ಪ್ರತ್ಯೇಕವಾಗಿ ಸ್ಮಶಾನ ನೀಡಲು ನಿಯಮದಲ್ಲಿ ಅವಕಾಶವಿಲ್ಲ ಎಂದರು.

ADVERTISEMENT

ಜಿಲ್ಲಾಧಿಕಾರಿ ಕೆ.ರಾಕೇಶ್‍ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಕಳೆದ 2 ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅತ್ಯುತ್ತಮ ಮಳೆಯಾಗಿದೆ. ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದೇವೆ. ಈ ಬಾರಿ 163 ಮನೆಗಳು ಹಾನಿಯಾಗಿದೆ. ಹಾನಿಯಾದ ಕುಟುಂಬಗಳಿಗೆ ಆಯಾ ತಹಶೀಲ್ದಾರ್ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಎಲ್ಲ ಪಿಂಚಣಿ ಯೋಜನೆಗಳಿಗೆ ಆಧಾರ್ ಲಿಂಕ್ ಕಡ್ಡಾಯವಾಗಿ ಮಾಡಿಸಬೇಕು. ಅಂಚೆ ಕಚೇರಿ ಬದಲಾಗಿ ಬ್ಯಾಂಕುಗಳಿಗೆ ಹಣ ಜಮೆಯಾಗುವಂತೆ ಮಾಡಬೇಕು ಎಂದು ಸಚಿವರು ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ತಹಶೀಲ್ದಾರ್ ಕಚೇರಿಗಳಲ್ಲಿ ಮದ್ಯವರ್ತಿಗಳ ಹಾವಳಿ ಬಗ್ಗೆ ಶಾಸಕ ಜಯರಾಂ ಸಚಿವರ ಗಮನಕ್ಕೆ ತಂದಾಗ, ತಂಡ ರಚಿಸಿ ತಹಶೀಲ್ದಾರ್ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.

ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಜಯರಾಂ, ನಾಗೇಶ್, ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.