
ಬಂಧನ
ತುಮಕೂರು: ತಾಲ್ಲೂಕಿನ ಸಿಂಗೋನಹಳ್ಳಿ ಕಾಲೊನಿಯಲ್ಲಿ ಮಂಗಳವಾರ ನಡೆದ ತಾಯಿ, ಇಬ್ಬರು ಮಕ್ಕಳು ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ವರದಕ್ಷಿಣೆ ಕಿರುಕುಳದ ಆರೋಪದ ಮೇಲೆ ಮೃತ ಮಹಿಳೆಯ ಅತ್ತೆ ರೇಣುಕಮ್ಮ (50) ಎಂಬುವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂಪತ್ ಕುಮಾರ್ ಪತ್ನಿ ವಿಜಯಲಕ್ಷ್ಮಿ (26) ತನ್ನ ಐದು ವರ್ಷದ ಅವಳಿ ಮಕ್ಕಳಾದ ಚೇತನ ಹಾಗೂ ಚೈತನ್ಯ ಎಂಬುವರನ್ನು ನೀರಿನ ಸಂಪ್‌ನಲ್ಲಿ ಮುಳುಗಿಸಿ, ನಂತರ ಅವರೂ ಆತ್ಮಹತ್ಯೆ ಮಾಡಿಕೊಂಡಿದ್ದರು.
‘ಅತ್ತೆ ಕಿರುಕುಳದಿಂದ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಕ್ಷಿಣೆ ತರುವಂತೆ ಒತ್ತಡ ಹೇರುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ವಿಜಯಲಕ್ಷ್ಮಿ ತಂಗಿ ಮೇಘನಾ ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
‘ಗಂಡ, ಮಾವ ಬಿಟ್ಟು ಅತ್ತೆ ಮೇಲೆ ಮಾತ್ರ ದೂರು ಸಲ್ಲಿಕೆಯಾಗಿದೆ. ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬುಧವಾರ ರೇಣುಕಮ್ಮ ಅವರನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.