ಕುಣಿಗಲ್: ತಾಲ್ಲೂಕಿನ ತೆಪ್ಪಸಂದ್ರ ಯುವಕರ ತಂಡ ಸೇರಿ ನಿರ್ಮಿಸಿರುವ ಸಂಡೆ ಟಾಕೀಸ್ ಪ್ರೊಡಕ್ಷನ್‌ರವರ ‘ನಮ್ಮೂರ್ ಕುಣಿಗಲ್’ ಚಿತ್ರದ ಆಡಿಯೊ ಬಿಡುಗಡೆ ಸಮಾರಂಭವನ್ನು ಕುಣಿಗಲ್ ತಾಲ್ಲೂಕಿನಲ್ಲಿ ಜನವರಿ ಒಂದರಂದು ಹಮ್ಮಿಕೊಳ್ಳಲಾಗಿದೆ ಎಂದು ನಿರ್ದೇಶಕ ಗಗನ್ ರೇವಣ್ಣ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿ, ಚಿತ್ರವನ್ನು ಬಹುಭಾಗ ತಾಲ್ಲೂಕಿನಲ್ಲಿ ಚಿತ್ರೀಕರಿಸಲಾಗಿದೆ. ಗ್ರಾಮೀಣ ಪ್ರತಿಭೆಗಳನ್ನು ಪರಿಚಯಿಸುತ್ತಿರುವ ಈ ಚಿತ್ರದಲ್ಲಿ ಜಿನ್ನು ಆಗಸ್ಟೀನ್ ಸಂಗೀತ ನೀಡಿರುವ ನಾಲ್ಕು ಹಾಡುಗಳಿವೆ. ಆಡಿಯೊ ಬಿಡುಗಡೆ ಕಾರ್ಯವನ್ನು ವಿಶೇಷವಾಗಿ ಹಮ್ಮಿಕೊಂಡಿದ್ದು ತೆಪ್ಪಸಂದ್ರದ ನರಸಿಂಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ತಾಲ್ಲೂಕಿನ 15 ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ನೃತ್ಯ ಪ್ರದರ್ಶನದೊಂದಿಗೆ ಮತ್ತು ಪಟ್ಟಣದ ಹುಚ್ಚಮಾಸ್ತಿ ಗೌಡ ವೃತ್ತದಲ್ಲಿ ಸಂಜೆ ಶಾಸಕರು ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ನಾಯಕ ನಟ ಪ್ರಸನ್ನ, ರಘು, ಕಾರ್ಯನಿರ್ವಾಹಕ ವ್ಯವಸ್ಥಾಪಕ ಬಾಲಸುಬ್ರಮಣ್ಯಂ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.