ADVERTISEMENT

ತುರುವೇಕೆರೆ | ನಾರಾಯಣ ಗುರು ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 6:30 IST
Last Updated 15 ಸೆಪ್ಟೆಂಬರ್ 2025, 6:30 IST
ತುರುವೇಕೆರೆ ತಾಲ್ಲೂಕು ಆಡಳಿತದ ವತಿಯಿಂದ ತಾಲ್ಲೂಕು ಕಚೇರಿಯಲ್ಲಿ ನಡದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮ ದಿನಾಚರಣೆ ವೇಳೆ ಶಾಸಕರಾದ ಎಂ.ಟಿ.ಕೃಷ್ಣಪ್ಪ ಮತ್ತು ತಹಸೀಲ್ದಾರ್ ಎನ್.ಎ.ಕುಂಇ ಅಹಮದ್ ರವರನ್ನು ಗೌರವಿಸಲಾಯಿತು.
ತುರುವೇಕೆರೆ ತಾಲ್ಲೂಕು ಆಡಳಿತದ ವತಿಯಿಂದ ತಾಲ್ಲೂಕು ಕಚೇರಿಯಲ್ಲಿ ನಡದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮ ದಿನಾಚರಣೆ ವೇಳೆ ಶಾಸಕರಾದ ಎಂ.ಟಿ.ಕೃಷ್ಣಪ್ಪ ಮತ್ತು ತಹಸೀಲ್ದಾರ್ ಎನ್.ಎ.ಕುಂಇ ಅಹಮದ್ ರವರನ್ನು ಗೌರವಿಸಲಾಯಿತು.   

ತುರುವೇಕೆರೆ: ತಾಲ್ಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು 171ನೇ ಜನ್ಮ ದಿನಾಚರಣೆಯನ್ನು ತಾಲ್ಲೂಕು ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.

ಶಾಸಕ ಎಂ.ಟಿ.ಕೃಷ್ಣಪ್ಪ, ನಾರಾಯಣ ಗುರು ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ತಹಶೀಲ್ದಾರ್‌ ಎನ್.‌ಎ.‌ಕುಂಇ ಅಹಮದ್‌, ಗ್ರೇಡ್‌ 2 ತಹಶೀಲ್ದಾರ್‌ ಸುಮತಿ, ತಾಲ್ಲೂಕು ಈಡಿಗರ ಸಂಘದ ಅಧ್ಯಕ್ಷ ಎಸ್‌.ಎಲ್.ಎನ್‌ ರಾಜಣ್ಣ, ಉಪಾಧ್ಯಕ್ಷ ಉಮೇಶಣ್ಣ, ಕಾರ್ಯದರ್ಶಿ ಗೋಪಾಲ್‌, ಮುಗಳೂರು ಮಂಜಣ್ಣ, ಶ್ರೀನಿವಾಸ್‌ ಸೇರಿದಂತೆ ಹಲವರು ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಲ್ಲೂಕು ಈಡಿಗರ ಸಮಾಜದಿಂದ ಶಾಸಕ ಎಂ.ಟಿ.ಕೃಷ್ಣಪ್ಪ ಮತ್ತು ತಹಶೀಲ್ದಾರ್‌ ಎನ್‌.ಎ.ಕುಂಇ ಅಹಮದ್‌ ಅವರನ್ನು ಗೌರವಿಸಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.