ADVERTISEMENT

ರೈತ ಮೋರ್ಚಾದಿಂದ ಮೋದಿಗೆ ಆಭಿನಂದನೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2019, 16:08 IST
Last Updated 6 ಫೆಬ್ರುವರಿ 2019, 16:08 IST
ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಬಂಡಿಯ ಮೇಲೆ ಪ್ರಧಾನಿ ನರೇಂದ್ರ ಮೋದಿಯ ಭಾವಚಿತ್ರವನ್ನಿಟ್ಟು ಹಾಲಿನ ಅಭಿಷೇಕ ಮಾಡಲಾಯಿತು. ಜಿ.ಎಸ್.ಬಸವರಾಜು, ಶಿವಪ್ರಸಾದ್ ಇದ್ದರು
ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಬಂಡಿಯ ಮೇಲೆ ಪ್ರಧಾನಿ ನರೇಂದ್ರ ಮೋದಿಯ ಭಾವಚಿತ್ರವನ್ನಿಟ್ಟು ಹಾಲಿನ ಅಭಿಷೇಕ ಮಾಡಲಾಯಿತು. ಜಿ.ಎಸ್.ಬಸವರಾಜು, ಶಿವಪ್ರಸಾದ್ ಇದ್ದರು   

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಮಧ್ಯಂತರ ಬಜೆಟ್‌ನಲ್ಲಿ ಜಾರಿಗೊಳಿಸಿರುವ ಪ್ರಧಾನಿ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ 12 ಕೋಟಿ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಶಿವಪ್ರಸಾದ್‌ ನುಡಿದರು.

ನಗರದ ಶೆಟ್ಟಿಹಳ್ಳಿಯಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಈ ಯೋಜನೆಯಡಿ ₹ 6 ಸಾವಿರವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಹೇಳಿದರು.

ADVERTISEMENT

ಮಾಜಿ ಸಂಸದ ಜಿ.ಎಸ್.ಬಸವರಾಜ್, ‘ಆಯುಷ್ಮಾನ್ ಭಾರತ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಜಾರಿಗೆ ತರುವ ಮೂಲಕ ಕೋಟ್ಯಂತರ ಬಡ ಕುಟುಂಬಗಳ ಆರೋಗ್ಯ ಸುರಕ್ಷತೆಯನ್ನು ಪ್ರಧಾನ ಮಂತ್ರಿ ಕಾಪಾಡುತ್ತಿದ್ದಾರೆ’ ಎಂದರು.

ಮುಖಂಡ ಡಾ.ಹುಲಿನಾಯ್ಕರ್, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸ್ನೇಕ್ ನಂದೀಶ್, ಪ್ರಧಾನ ಕಾರ್ಯದರ್ಶಿ ಮಹೇಶ್, ನಗರ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರವೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.