ADVERTISEMENT

ಮಧುಗಿರಿ | ದೇಶದ ಮುಂದಿದೆ ಹಲವು ಸವಾಲು; ಶಾಸಕ ಕೆ.ಎನ್.ರಾಜಣ್ಣ

ಧರ್ಮಗಳ ನಡುವೆ ದ್ವೇಷ ಬಿತ್ತಲಾಗುತ್ತಿದೆ– ಶಾಸಕ ಕೆ.ಎನ್‌. ರಾಜಣ್ಣ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 3:10 IST
Last Updated 16 ಆಗಸ್ಟ್ 2025, 3:10 IST
ಮಧುಗಿರಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಿವೃತ್ತ ಯೋಧರನ್ನು ಸತ್ಕರಿಸಲಾಯಿತು
ಮಧುಗಿರಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಿವೃತ್ತ ಯೋಧರನ್ನು ಸತ್ಕರಿಸಲಾಯಿತು   

ಮಧುಗಿರಿ: ಮಹನೀಯರ ತ್ಯಾಗ ಮತ್ತು ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರತಿದೆ. ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.

ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ನಂತರ ದೇಶದ ಜನರಿಗೆ ಸ್ವಾಭಿಮಾನದ ಬದುಕು ಕಲ್ಪಿಸಲು ಇಂದಿರಾ ಗಾಂಧಿ ಬ್ಯಾಂಕ್‌ಗ ರಾಷ್ಟ್ರೀಕರಣ, ಗರೀಬಿ ಹಟಾವೊದಂತಹ ಕಾರ್ಯಕ್ರಮಗಳ ಮೂಲಕ ಸ್ವಾಭಿಮಾನದ ಬದುಕಿಗೆ ಕಾರಣರಾದರು ಎಂದುರು.

ADVERTISEMENT

‘ಮುಂದಿನ ದಿನಗಳಲ್ಲಿ ಹೆಚ್ಚು ಸವಾಲುಗಳಿದ್ದು, ಧರ್ಮಗಳ ನಡುವೆ ದ್ವೇಷ ಬಿತ್ತಲಾಗುತ್ತಿದೆ. ಮಹಾತ್ಮಗಾಂಧಿ ಹಿಂದೂ, ಗಾಂಧೀಜಿಯನ್ನು ಕೊಂದ ಗೋಡ್ಸೆಯೂ ಹಿಂದೂ. ನಮ್ಮದು ಮಹಾತ್ಮಗಾಂಧಿ ಪ್ರತಿಪಾದಿಸಿದ ಹಿಂದುತ್ವ. ಕಿಡಿಗೇಡಿಗಳದ್ದು ಗೋಡ್ಸೆ ಹಿಂದುತ್ವ’ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಗೊಟೋರು ಶಿವಪ್ಪ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರು ಭಾರತದ ಬಗ್ಗೆ ಮಹೋನ್ನತ ನಿರೀಕ್ಷೆಗಳನ್ನು ಹೊಂದಿ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ಅವರ ಕನಸುಗಳನ್ನು ಉಳಿಸಿಕೊಂಡು ಹೋಗುವುದು ಯುವ ಜನರ ಕರ್ತವ್ಯ ಎಂದರು.

ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಶಶಿಧರ್, ಪುರಸಭೆ ಅಧ್ಯಕ್ಷ ಲಾಲಾಪೇಟೆ ಮಂಜುನಾಥ್, ಕೆಪಿಸಿಸಿ ಸದಸ್ಯ ಎಂ.ಎಸ್. ಮಲ್ಲಿಕಾರ್ಜುನಯ್ಯ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ. ರಾಜಣ್ಣ, ಪುರಸಭೆ ಉಪಾಧ್ಯಕ್ಷೆ ಸುಜಾತ ಶಂಕರನಾರಾಯಣ, ಡಿವೈಎಸ್‌ಪಿ ಮಂಜುನಾಥ್, ತಾ.ಪಂ ಇಒ ಲಕ್ಷ್ಮಣ್, ತಹಶೀಲ್ದಾರ್ ಶ್ರೀನಿವಾಸ್, ಡಿಡಿಪಿಐ ಮಾದವರೆಡ್ಡಿ, ಬಿಇಒ ಹನುಮಂತರಾಯಪ್ಪ, ಲೋಕೋಪಯೋಗಿ ಇಲಾಖೆ ಇಇ ಹನುಮಂತರಾವ್, ವಲಯ ಅರಣ್ಯಾಧಿಕಾರಿ ಸುರೇಶ್, ಪುರಸಭೆ ಮುಖ್ಯಾಧಿಕಾರಿ ಸುರೇಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.