ADVERTISEMENT

ಕೊರಟಗೆರೆ: ಕಸದ ಬುಟ್ಟಿ ಬಳಸಿ ರಾಷ್ಟ್ರಧ್ವಜ ಹಾರಾಟ, ಸಾರ್ವಜನಿಕರಿಂದ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 3:53 IST
Last Updated 14 ಆಗಸ್ಟ್ 2022, 3:53 IST
ಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ಶನಿವಾರ ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜ ಹಾರಿಸಲಾಗಿದೆ
ಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ಶನಿವಾರ ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜ ಹಾರಿಸಲಾಗಿದೆ   

ಕೊರಟಗೆರೆ: ತಾಲ್ಲೂಕಿನಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜ ಹಾರಿಸಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ‘ಹರ್ ಘರ್‌ ತಿರಂಗಾ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಪ್ರಯುಕ್ತ ಗ್ರಾ.ಪಂ ಕಟ್ಟಡದ ಮೇಲೆ ರಾಷ್ಟ್ರ ಧ್ವಜ ಹಾರಿಸುವಾಗ ಕಸದ ಬುಟ್ಟಿ ಬಳಸಿದ್ದು, ಸದ್ಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆ. ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ADVERTISEMENT

ನೋಟಿಸ್‌ ಜಾರಿ: ಘಟನೆಯ ಕುರಿತು ಸಮಜಾಯಿಷಿ ನೀಡುವಂತೆ ಗ್ರಾ.ಪಂ ನೀರುಗಂಟಿ ನವೀನ್‌ಕುಮಾರ್‌ಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನೋಟಿಸ್‌ ಜಾರಿ ಮಾಡಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು ತಿಳಿಸದೆ ಇದ್ದರೂ ನೀರುಗಂಟಿ ನವೀನ್‌ಕುಮಾರ್‌ ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ್ದು, ಉದ್ದೇಶ ಪೂರ್ವಕವಾಗಿ ಈ ಕೆಲಸ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ನವೀನ್‌ಕುಮಾರ್‌ ಸರ್ಕಾರಿ ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದ್ದು, ಈ ಕುರಿತು ಒಂದು ದಿನದ ಒಳಗೆ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.