ADVERTISEMENT

ಇಂದಿರಾ ಕ್ಯಾಂಟೀನ್‌ನಲ್ಲಿ ಹೊಸ ಮೆನು; ಮುದ್ದೆ, ಚಪಾತಿ, ಕೇಸರಿಬಾತ್ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 28 ಮೇ 2025, 16:11 IST
Last Updated 28 ಮೇ 2025, 16:11 IST
ರಾಗಿ ಮುದ್ದೆ ಊಟ
ರಾಗಿ ಮುದ್ದೆ ಊಟ   

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್‍ಗಳಲ್ಲಿ ಹೊಸ ಮೆನು ಆರಂಭಿಸಲಾಗಿದ್ದು, ಇನ್ನು ಮುಂದೆ ಮುದ್ದೆ, ಚಪಾತಿ, ಕೇಸರಿಬಾತ್ ಸಹ ಸಿಗಲಿದೆ.

ಬೆಳಗಿನ ಉಪಾಹಾರಕ್ಕೆ ರೈಸ್‌ಬಾತ್, ಚಿತ್ರಾನ್ನ, ಉಪ್ಪಿಟ್ಟು, ಕೇಸರಿಬಾತ್, ಇಡ್ಲಿ ಸಾಂಬಾರ್, ಚಟ್ನಿ ನೀಡಲಾಗುತ್ತದೆ. ಮಧ್ಯಾಹ್ನದ ಊಟಕ್ಕೆ ಮುದ್ದೆ, ಅನ್ನ ಸಾಂಬಾರ್, ಮೊಸರನ್ನ, ಚಪಾತಿ ಊಟ ಕೊಡಲಾಗುತ್ತದೆ. ರಾತ್ರಿ ವೇಳೆ ರೈಸ್‌ಬಾತ್, ಮೊಸರನ್ನ ನೀಡಲಾಗುತ್ತದೆ ಎಂದು ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.

ಬೆಳಗಿನ ಉಪಾಹಾರಕ್ಕೆ ₹5, ಮಧ್ಯಾಹ್ನ, ರಾತ್ರಿ ಊಟಕ್ಕೆ ₹10 ನಿಗದಿಪಡಿಸಲಾಗಿದೆ. ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ 4 ಇಂದಿರಾ ಕ್ಯಾಂಟೀನ್ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಜಿಲ್ಲಾ ಆಸ್ಪತ್ರೆ, ಎಪಿಎಂಸಿ ಮಾರುಕಟ್ಟೆ ಬಳಿ ಕ್ಯಾಂಟೀನ್ ತೆರೆಯಲಾಗಿದೆ. ನಗರದ ವ್ಯಾಪ್ತಿಯಲ್ಲಿ ಒಟ್ಟು 6 ಇಂದಿರಾ ಕ್ಯಾಂಟೀನ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಜನರಿಗೆ ಪೌಷ್ಟಿಕ ಆಹಾರ ನೀಡುವ ಸಲುವಾಗಿ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಪ್ರತಿ ಕ್ಯಾಂಟೀನ್‍ನಲ್ಲೂ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಆರ್.ಓ ಘಟಕ ಅಳವಡಿಸಲಾಗಿದೆ. ಸಾರ್ವಜನಿಕರನ್ನು ಆಕರ್ಷಿಸಲು ಹೋಟೆಲ್‍ಗಳಿಗಿಂತ ವಿಭಿನ್ನ ರೀತಿಯಲ್ಲಿ ಕ್ಯಾಂಟೀನ್‌ಗಳನ್ನು ಹೂಗುಚ್ಛ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಿ ನಿರ್ವಹಿಸಲಾಗುತ್ತಿದೆ ಎಂದಿದ್ದಾರೆ.

ಊಟದ ರುಚಿ ಹಾಗೂ ಶುಚಿತ್ವದಲ್ಲಿ ಕೊರತೆ ಕಂಡು ಬಂದರೆ ಪಾಲಿಕೆಗೆ ನೇರವಾಗಿ ದೂರು ನೀಡಬಹುದಾಗಿದೆ.

ಇಂದಿರಾ ಕ್ಯಾಂಟೀನ್‍

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.