ADVERTISEMENT

ಎನ್ಎಂಎಂಎಸ್; ಅಮೃತೂರು ವಿದ್ಯಾರ್ಥಿಗಳ ಸಾಧನೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 14:37 IST
Last Updated 17 ಮಾರ್ಚ್ 2020, 14:37 IST
ಎನ್ಎಂಎಂಎಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಕುಣಿಗಲ್ ತಾಲ್ಲೂಕು ಅಮೃತೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕವರ್ಗ
ಎನ್ಎಂಎಂಎಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಕುಣಿಗಲ್ ತಾಲ್ಲೂಕು ಅಮೃತೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕವರ್ಗ   

ಕುಣಿಗಲ್: ಎನ್ಎಂಎಂಎಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತಾಲ್ಲೂಕಿನ ಅಮೃತೂರು ಸರ್ಕಾರಿ ಶಾಲೆಯ ಅತಿ ಹೆಚ್ಚು ವಿದ್ಯಾರ್ಥಿಗಳು ನಿರಂತರವಾಗಿ ಆಯ್ಕೆಯಾಗುವ ಮೂಲಕ ಸಾಧನೆ ಮಾಡುತ್ತಿದ್ದಾರೆ.

ರಾಜ್ಯ ಶಿಕ್ಷಣ ಸಂಶೋಧನ ಮತ್ತು ತರಬೇತಿ ಸಂಸ್ಥೆಯಿಂದ ಪ್ರತಿವರ್ಷ ನ್ಯಾಷನಲ್ ಮೀನ್ಸ್ ಕಂ ಮೆರಿಟ್ ಸ್ಕಾಲರ್ ಶಿಫ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಮೃತೂರು ಕರ್ನಾಟಕ ಪಬ್ಲಿಕ್ ಶಾಲೆಯ 8ನೇ ತರಗತಿಯ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಸತತ 5 ವರ್ಷದಿಂದ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಿಂದ ಆಯ್ಕೆಯಾಗುತ್ತಿದ್ದಾರೆ ಎಂದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ತಿಳಿಸಿದ್ದಾರೆ.

ADVERTISEMENT

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರತಿವಿದ್ಯಾರ್ಥಿಗೆ ತಿಂಗಳಿಗೆ ₹1000ದಂತೆ ನಿರಂತರ 4 ವರ್ಷದವರೆಗೆ ಒಟ್ಟು ₹48 ಸಾವಿರ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ. ಶಾಲೆಯ ಗಣಿತ ಶಿಕ್ಷಕ ಬಿ.ಬಿ.ನಾಗರಾಜು ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.