ಬಿ.ಸುರೇಶ್‌ಗೌಡ
ತುಮಕೂರು: ಸಚಿವ ಜಿ.ಪರಮೇಶ್ವರ ಅವರಿಗೆ ಅಗೌರವ ಸೂಚಿಸುವ ಒಂದೇ ಒಂದು ಪದವನ್ನೂ ಬಳಸಿಲ್ಲ ಎಂದು ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡ ಸ್ಪಷ್ಟಪಡಿಸಿದ್ದಾರೆ.
‘ಪರಮೇಶ್ವರ ಅವರು ಜಿಲ್ಲಾ ಉಸ್ತುವಾರಿ ಸಚಿವರು. ಜಿಲ್ಲೆಯ ಅಭಿವೃದ್ಧಿ ವಿಚಾರ, ಹೇಮಾವತಿ ಲಿಂಕ್ ಕೆನಾಲ್ ಬಗ್ಗೆ ಮಾತನಾಡಿದ್ದೇನೆ. ಇಂತಹ ವಿಚಾರಗಳಿಗೆ ಪರಮೇಶ್ವರ ಅವರೇ ಉತ್ತರ ಕೊಡಬೇಕಾಗುತ್ತದೆ. ಪರಿಶಿಷ್ಟ ಜಾತಿಯವರು ಎಂಬ ಕಾರಣಕ್ಕೆ ಟೀಕೆ ಮಾಡಿದ್ದೇನೆಯೇ. ಎಲ್ಲಾದರೂ ಜಾತಿ ಬಳಸಿದ್ದೇನೆಯೇ. ಅಭಿವೃದ್ಧಿ ವಿಚಾರ ಪ್ರಸ್ತಾಪಿಸಿದರೆ ಜಾತಿ ಪ್ರಸ್ತಾಪಿಸಿದಂತೆ ಆಗುತ್ತದೆಯೇ’ ಎಂದು ಪ್ರಶ್ನಿಸಿದ್ದಾರೆ.
ಅಭಿವೃದ್ಧಿ ವಿಚಾರಕ್ಕೆ ಉತ್ತರ ಕೊಡಲಾಗದೆ ಅನಗತ್ಯವಾಗಿ ಜಾತಿಯ ವಿಚಾರ ಪ್ರಸ್ತಾಪ ಮಾಡಲಾಗಿದೆ. ಎತ್ತಿದ ಪ್ರಶ್ನೆಗೆ ಉತ್ತರ ನೀಡುವುದು ಬಿಟ್ಟು ವಿಷಯಾಂತರ ಮಾಡಿದ್ದಾರೆ. ರಾಜಕಾರಣದಲ್ಲಿ ವಿರೋಧ ಪಕ್ಷಗಳು ಅಧಿಕಾರದಲ್ಲಿ ಇರುವವರಿಗೆ ಪ್ರಿಯವಾಗುವಂತಹ ಮಾತುಗಳನ್ನು ಹೇಳಿಕೊಂಡು ಬರಲು ಆಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.