ADVERTISEMENT

ಕುಣಿಗಲ್: ಪೌರ ಕಾರ್ಮಿಕರಿಗಿಲ್ಲ ಸುರಕ್ಷೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2020, 4:50 IST
Last Updated 26 ಆಗಸ್ಟ್ 2020, 4:50 IST
ಕುಣಿಗಲ್ ಪುರಸಭೆಯ ಪೌರಕಾರ್ಮಿಕರು ಸುರಕ್ಷತಾ ಸಾಮಗ್ರಿಗಳನ್ನು ಬಳಸದೆ ಕಸ ಸಂಗ್ರಹ ಮಾಡುತ್ತಿರುವುದು
ಕುಣಿಗಲ್ ಪುರಸಭೆಯ ಪೌರಕಾರ್ಮಿಕರು ಸುರಕ್ಷತಾ ಸಾಮಗ್ರಿಗಳನ್ನು ಬಳಸದೆ ಕಸ ಸಂಗ್ರಹ ಮಾಡುತ್ತಿರುವುದು   

ಕುಣಿಗಲ್: ಪೌರ ಕಾರ್ಮಿಕರು ಸುರಕ್ಷತಾ ಸಾಮಗ್ರಿಗಳಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕಾಗಿದೆ ಎಂದು ಕೆಲ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಪುರಸಭೆಯಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ನಿತ್ಯ ಕಾರ್ಯ ನಿರ್ವಹಿಸುತ್ತಿದ್ದು, ಅವರಲ್ಲಿ ಶೇ 50ಕ್ಕೂ ಹೆಚ್ಚು ಮಹಿಳೆಯರಿದ್ದಾರೆ. ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಹ ಹೆಚ್ಚಾಗುತ್ತಿದ್ದು, ಸುಮಾರು 80ಕ್ಕೂ ಹೆಚ್ಚು ಗಲ್ಲಿಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಈ ಹಂತದಲ್ಲಿ ನೈರ್ಮಲ್ಯ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಕೈ, ಮುಖ ಗವಸು, ಕಾಲಿಗೆ ಶೂ ಧರಿಸದೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ADVERTISEMENT

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕಾದ್ದು ಪುರಸಭೆಯ ಜವಾಬ್ದಾರಿ. ಪುರಸಭೆಯಲ್ಲಿ ಜನಪ್ರತಿನಿಧಿಗಳ ಆಡಳಿತವಿಲ್ಲ, ಉಪ ವಿಭಾಗಾಧಿಕಾರಿಗಳು ಆಡಳಿತಾಧಿ ಕಾರಿಯಾಗಿದ್ದಾರೆ. ಪೌರಕಾರ್ಮಿಕರ ಕೆಲಸ ಮೇಲ್ವಿಚಾರಣೆಗೆ ಮೇಸ್ತ್ರಿ, ಆರೋಗ್ಯ ನಿರೀಕ್ಷಕರು ಮತ್ತು ಮುಖ್ಯಾಧಿಕಾರಿ ಇದ್ದಾರೆ. ಆದರೂ, ಈ ಬಗ್ಗೆ ಗಮನ ಹರಿಸದಿರುವುದು ಖಂಡನೀಯ ಎಂದು ಸೇವಾ ಭಾಗ್ಯ ಫೌಂಡೇಷನ್ ಕಾರ್ಯದರ್ಶಿ ವಿನೋದ್ ಗೌಡ, ಕರವೇ ಅಧ್ಯಕ್ಷ ಮಂಜುನಾಥ್ ತಿಳಿಸಿದರು.

ಜತೆಗೆ ಸುರಕ್ಷತಾ ಸಾಮಗ್ರಿಗಳನ್ನು ವಿತರಿಸಿದ್ದರೂ ಬಳಸದೆ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.