ADVERTISEMENT

ಕೋವಿಡ್–19: ಸೋಂಕಿತರ ಸ್ಥಳಾಂತರಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಮೇ 2021, 5:00 IST
Last Updated 6 ಮೇ 2021, 5:00 IST

ತುಮಕೂರು: ಕೋವಿಡ್–19 ಸೋಂಕು ದೃಢಪಟ್ಟು ಹೋಂ ಕ್ವಾರಂಟೈನ್‍ನಲ್ಲಿ ಇರುವವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸ್ಥಳಾಂತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಅಧಿಕಾರಿಗಳು ಸಮನ್ವಯ ಸಾಧಿಸುವ ಮೂಲಕ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಸಮರ್ಪಕ ಚಿಕಿತ್ಸೆ ನೀಡಬೇಕು. ಮಾರ್ಗಸೂಚಿ ಅನ್ವಯ ಆಮ್ಲಜನಕ, ರೆಮ್‌ಡಿಸಿವಿರ್ ಚುಚ್ಚು
ಮದ್ದು ನೀಡಬೇಕುಎಂದು ಹೇಳಿದರು.

ADVERTISEMENT

ಸಂಸದ ಜಿ.ಎಸ್.ಬಸವರಾಜು, ‘ಆಮ್ಲಜನಕ, ರೆಮ್‌ಡಿಸಿವಿರ್ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಗುಬ್ಬಿ ತಾಲ್ಲೂಕಿನ ಕೆಲವು ಕಡೆ ಜಾತ್ರೆ ಮಾಡಿದರೂ ಕ್ರಮ ಕೈಗೊಂಡಿಲ್ಲ. ಕಡ್ಡಾಯವಾಗಿ ಜಾತ್ರೆ ನಿಷೇಧ ಮಾಡದಿದ್ದರೆ ತಹಶೀಲ್ದಾರ್ ಅವರನ್ನೇ ಹೊಣೆಮಾಡಿ ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶಿಸಿದರು.

ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ, ‘ಹೋಂ ಕ್ವಾರಂಟೈನ್‍ನಲ್ಲಿ ಇರುವ ಸೋಂಕಿತರ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಸೋಂಕಿತರ ಸುತ್ತಮುತ್ತ ನಾಲ್ಕೈದು ಪ್ರಕರಣಗಳು ಕಂಡುಬಂದರೆ ತಕ್ಷಣವೇ ಆ ಬೀದಿಯಲ್ಲಿ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು’ ಎಂದು ಹೇಳಿದರು.

ಶಾಸಕ ಬಿ.ಸಿ.ನಾಗೇಶ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಡಾ.ಎಂ.ಆರ್.ಹುಲಿನಾಯ್ಕರ್, ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್, ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ಅಜಯ್, ಡಿಎಚ್‌ಓ ಡಾ.ನಾಗೇಂದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.