ADVERTISEMENT

ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2021, 4:45 IST
Last Updated 14 ಆಗಸ್ಟ್ 2021, 4:45 IST
ತುಮಕೂರಿನಲ್ಲಿ ಶುಕ್ರವಾರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ದೊರಕುವ ಸೌಲಭ್ಯಗಳು, ಉದ್ಯೋಗ ಖಾತರಿ ಯೋಜನೆ ಕುರಿತ ಕರಪತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಾಪುರವಾಡ್, ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ ಇದ್ದರು
ತುಮಕೂರಿನಲ್ಲಿ ಶುಕ್ರವಾರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ದೊರಕುವ ಸೌಲಭ್ಯಗಳು, ಉದ್ಯೋಗ ಖಾತರಿ ಯೋಜನೆ ಕುರಿತ ಕರಪತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಾಪುರವಾಡ್, ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ ಇದ್ದರು   

ತುಮಕೂರು: ಮಹಾನಗರ ಪಾಲಿಕೆ ಸೇರಿದಂತೆ ನಗರ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ತ್ಯಾಜ್ಯ ನಿರ್ವಹಣೆಗೆ ಸೂಕ್ತ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳುವ ಮೂಲಕ ಸ್ವಚ್ಛತೆ ಕಾಪಾಡಬೇಕು ಎಂದು ತಿಳಿಸಿದರು.

ರಾಜ್ಯ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ನಗರ ಅಥವಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಬದಿಯಲ್ಲಿ ಕಸದ ರಾಶಿಯೇ ಕಂಡುಬರುತ್ತಿದೆ. ಮೊದಲು ಅಲ್ಲಿನ ತ್ಯಾಜ್ಯದ ವಿಲೇವಾರಿಗೆ ಮುಂದಾಗುವಂತೆ ನಿರ್ದೇಶನ ನೀಡಿದರು.

ADVERTISEMENT

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಗೆ ಮೊದಲ ಆದ್ಯತೆ ನೀಡಬೇಕು. ಅನಗತ್ಯವಾಗಿ ಪ್ಲಾಸ್ಟಿಕ್ ಬಳಕೆಯಿಂದಾಗಿ ತ್ಯಾಜ್ಯದ ಸಮಸ್ಯೆ ಹೆಚ್ಚಾಗುತ್ತಿದೆ. ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ಕಡಿವಾಣ ಹಾಕಲು ಮಾರಾಟ ಮಾಡುತ್ತಿರುವ ಮಳಿಗೆಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿ ಬಳಕೆ ತಡೆಗಟ್ಟಬೇಕು ಎಂದು ಹೇಳಿದರು.

ಮನೆಗಳ ಬಳಿ ಕಸ ಸಂಗ್ರಹ ಕಾರ್ಯ ಸಮರ್ಪಕವಾಗಿ ನಡೆಯಬೇಕು. ಮನೆಗಳ ಬಳಿ ಪೂರ್ಣ ಪ್ರಮಾಣದಲ್ಲಿ ಕಸ ಸಂಗ್ರಹಣೆ ಮಾಡಿದರೆ ತ್ಯಾಜ್ಯ ಸಮಸ್ಯೆಯನ್ನು ಮೊದಲ ಹಂತದಲ್ಲೇ ಕಡಿಮೆ ಮಾಡಬಹುದು. ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇ
ಶಗಳಲ್ಲಿ ಕಸ ಸಂಗ್ರಹಣೆ ಕಾರ್ಯ ಸರಿಯಾಗಿ ನಡೆಸಬೇಕು
ಎಂದರು.

ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಮುಖ್ಯವಾಗಿ ಕೈಗಾರಿಕಾ ಪ್ರದೇಶಗಳಲ್ಲಿ ತ್ಯಾಜ್ಯ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.