ADVERTISEMENT

ರಕ್ತ ಕೊಟ್ಟೇವು ಪಿಂಚಣಿ ಬಿಡೆವು

ಎನ್‍ಪಿಎಸ್ ನೌಕರರ ಸಂಘದಿಂದ ರಕ್ತದಾನ ಮಾಡಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2019, 2:27 IST
Last Updated 8 ಡಿಸೆಂಬರ್ 2019, 2:27 IST
ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘದಿಂದ ರಕ್ತ ಕೊಟ್ಟೇವು ಪಿಂಚಣಿ ಬಿಡೆವು ಘೋಷ ವಾಕ್ಯದಡಿ ರಕ್ತದಾನ ಮಾಡುವ ಮೂಲಕ ರಾಷ್ಟ್ರವ್ಯಾಪಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಲಾಯಿತು
ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘದಿಂದ ರಕ್ತ ಕೊಟ್ಟೇವು ಪಿಂಚಣಿ ಬಿಡೆವು ಘೋಷ ವಾಕ್ಯದಡಿ ರಕ್ತದಾನ ಮಾಡುವ ಮೂಲಕ ರಾಷ್ಟ್ರವ್ಯಾಪಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಲಾಯಿತು   

ತುಮಕೂರು: ರಾಜ್ಯ ಸರ್ಕಾರ 2006ರಿಂದ ನೌಕರರಿಗೆ ಜಾರಿಗೊಳಿಸಿರುವ ನೂತನ ಪಿಂಚಣಿ ಯೋಜನೆ ಮರಣ ಶಾಸನವಾಗಿದೆ. ಹಳೇ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘದಿಂದ ರಕ್ತ ಕೊಟ್ಟೇವು ಪಿಂಚಣಿ ಬಿಡೆವು ಘೋಷ ವಾಕ್ಯದಡಿ ರಕ್ತದಾನ ಮಾಡುವ ಮೂಲಕ ರಾಷ್ಟ್ರವ್ಯಾಪಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಲಾಯಿತು.

2004ರಿಂದ ಕೇಂದ್ರ ಸರ್ಕಾರ ನೌಕರರಿಗೆ ಹಾಗೂ 2006ರಿಂದ ರಾಜ್ಯ ಸರ್ಕಾರ ನೌಕರರಿಗೆ ನೂತನ ಪಿಂಚಣಿ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ನೌಕರರಿಗೆ ಯಾವುದೇ ಭದ್ರತೆ ಇಲ್ಲ. ಈ ಬಗ್ಗೆ ಹಲವಾರು ಬಾರಿ ಸರ್ಕಾರದ ಗಮನ ಸೆಳೆದರೂ ಸರ್ಕಾರ ಸ್ಪಂದಿಸಿಲ್ಲ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್ ಆರೋಪಿಸಿದರು.

ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ.ವೀಣಾ ಮಾತನಾಡಿ, ಎನ್‍ಪಿಎಸ್ ನೌಕರರು ಹಳೇ ಪಿಂಚಣಿ ಯೋಜನೆ ಮುಂದುವರಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ರಕ್ತ ಬೇಕಾದರೆ ಕೊಟ್ಟೇವು ಪಿಂಚಣಿ ಬಿಡೆವು ಎಂಬ ಧ್ಯೇಯವಾಕ್ಯ ಬಹಳ ಅರ್ಥಪೂರ್ಣವಾಗಿದೆ ಎಂದರು.

ADVERTISEMENT

ಜಿಲ್ಲಾಸ್ಪತ್ರೆಯಲ್ಲಿ ಪದಾಧಿಕಾರಿಗಳು ರಕ್ತದಾನ ಮೂಡುವ ಮೂಲಕ ಹೋರಾಟ ಮಾಡಲಾಯಿತು.

ಡಾ.ಕೆ.ಎಸ್.ಕುಲಕರ್ಣಿ, ಡಾ.ವೀಣಾ, ಮಂಜುನಾಥ್, ರಮೇಶ್, ಅನಿಲ್ ಪ್ರಭಾಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.