ADVERTISEMENT

ನ. 29ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 6:07 IST
Last Updated 17 ಅಕ್ಟೋಬರ್ 2024, 6:07 IST

ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನ. 29 ಹಾಗೂ 30ರಂದು ನಗರದ ಅಮಾನಿಕೆರೆ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಬುಧವಾರ ನಡೆದ 16ನೇ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ದಿನಾಂಕ ನಿರ್ಧರಿಸಲಾಗಿದೆ. ಕಳೆದ ವರ್ಷ ಡಿ.29 ಹಾಗೂ 30ರಂದು ಸಮ್ಮೇಳನ ನಡೆದಿತ್ತು.

ಸಾಹಿತ್ಯ ಸಮ್ಮೇಳನವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಲು ವಿವಿಧ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಯಿತು. ಸಮ್ಮೇಳನದ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ADVERTISEMENT

ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.