ADVERTISEMENT

18ರಂದು ಬೆಂಗಳೂರಿಗೆ ಪಾದಯಾತ್ರೆ ಶುರು

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 4:07 IST
Last Updated 15 ಸೆಪ್ಟೆಂಬರ್ 2020, 4:07 IST
ಶಿರಾ ತಾಲ್ಲೂಕಿನ ಭುವನಹಳ್ಳಿ ಗ್ರಾಮಕ್ಕೆ ಸೋಮವಾರ ಜನತಾದಳ (ಸಂಯುಕ್ತ) ರಾಜ್ಯ ಘಟಕದ ಅಧ್ಯಕ್ಷ ಮಹಿಮಾ ಪಟೇಲ್ ಭೇಟಿ ನೀಡಿ ಶಾಸಕ ಬಿ.ಸತ್ಯನಾರಾಯಣ ಅವರ ಸಮಾಧಿಗೆ ಗೌರವ ಸಲ್ಲಿಸಿದರು
ಶಿರಾ ತಾಲ್ಲೂಕಿನ ಭುವನಹಳ್ಳಿ ಗ್ರಾಮಕ್ಕೆ ಸೋಮವಾರ ಜನತಾದಳ (ಸಂಯುಕ್ತ) ರಾಜ್ಯ ಘಟಕದ ಅಧ್ಯಕ್ಷ ಮಹಿಮಾ ಪಟೇಲ್ ಭೇಟಿ ನೀಡಿ ಶಾಸಕ ಬಿ.ಸತ್ಯನಾರಾಯಣ ಅವರ ಸಮಾಧಿಗೆ ಗೌರವ ಸಲ್ಲಿಸಿದರು   

ಶಿರಾ: ಕರ್ನಾಟಕದ ಕಲ್ಯಾಣಕ್ಕಾಗಿ ಸೆ. 18ರಿಂದ ಕೋಲಾರದಿಂದ ಬೆಂಗಳೂರಿನವರೆಗೆ ಜನತಾ ಪರಿವಾರ ದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜನತಾದಳ (ಸಂಯುಕ್ತ) ರಾಜ್ಯ ಘಟಕದ ಅಧ್ಯಕ್ಷ ಮಹಿಮಾ ಪಟೇಲ್ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪ್ರಸ್ತುತ ರಾಜಕೀಯ ವ್ಯವಸ್ಥೆ ತೀವ್ರ ಹದಗೆಟ್ಟಿದೆ. ಸರ್ಕಾರಗಳನ್ನು ಉಳಿಸಿಕೊಳ್ಳಲು ಶಾಸಕರ ಖರೀದಿ ಮಾಡುವಂತಾಗಿದೆ. ಪರ್ಯಾಯ ವ್ಯವಸ್ಥೆ ರೂಪಿಸುವುದು ಅತ್ಯವಶ್ಯ. ಆದ್ದರಿಂದ ಸಮಾನ ಮನಸ್ಕರು ಮುಂದಾಗಬೇಕು. ಈ ನಿಟ್ಟಿನಲ್ಲಿ ವಿವಿಧ ಹಂತಗಳಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ಪಾದ ಯಾತ್ರೆ ನಡೆಸಲಾಗುವುದು ಎದರು.

ADVERTISEMENT

ಶಿರಾ ವಿಧಾನಸಭೆಗೆ ಉಪಚುನಾವಣೆ ನಡೆಯುತ್ತಿದ್ದು, ಚೇತನ್ ಕುಮಾರ್ ಲಿಂಗದಹಳ್ಳಿ ನಮ್ಮ ಪಕ್ಷದಿಂದ ಆಕಾಂಕ್ಷಿಯಾಗಿದ್ದಾರೆ. ಅವರಿಗೆ ಪಕ್ಷ ಸಂಘಟಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಜೆಡಿಯು ಮುಖಂಡರಾದ ಜಿ.ವಿ.ರಾಮಚಂದ್ರಯ್ಯ, ಚೇತನ್ ಕುಮಾರ್ ಲಿಂಗದಹಳ್ಳಿ, ರವಿ, ಡಾ.ನಾಗರಾಜು, ಶಿವರಾಮ್, ಸೂರ್ಯಪ್ರಕಾಶ್, ಲಕ್ಕಣ್ಣ, ನಾಗಭೂಷಣ್, ಗಂಗರಾಜು ಇದ್ದರು.

ಕಾರ್ಯಕರ್ತರ ಸಭೆ: ನಗರದ ಪ್ರವಾಸಿ ಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಉಪಚುನಾವಣೆಯಲ್ಲಿ ಅನುಸರಿಸಬೇಕಾದ ತಂತ್ರಗಳ ಬಗ್ಗೆ ಚರ್ಚೆ ನಡೆಸಿದರು.

ಸಾಂತ್ವನ: ತಾಲ್ಲೂಕಿನ ಭುವನಹಳ್ಳಿ ಗ್ರಾಮಕ್ಕೆ ಸೋಮವಾರ ಮಹಿಮಾ ಪಟೇಲ್ ಭೇಟಿ ನೀಡಿ ದಿವಂಗತ ಶಾಸಕ ಬಿ.ಸತ್ಯನಾರಾಯಣ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಸತ್ಯನಾರಾಯಣ ಅವರ ಪುತ್ರ ಬಿ.ಎಸ್.ಸತ್ಯಪ್ರಕಾಶ್ ಅವರ ಜತೆ ಚರ್ಚೆ ನಡೆಸಿದರು. ನಂತರ ಸಮಾಧಿ ಸ್ಥಳಕ್ಕೆ ತೆರಳಿ ಗೌರವ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.