ತುಮಕೂರು: ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಜನಹಳ್ಳಿ ಗ್ರಾಮದ ಚನ್ನಯ್ಯ ಎಂಬುವರ ತೋಟದಲ್ಲಿ ಬೆಳೆದಿದ್ದ 8 ಗಾಂಜಾ ಗಿಡಗಳಿಂದ 20 ಕೆ.ಜಿ ಗಾಂಜಾ ಸೊಪ್ಪನ್ನು ಪೊಲೀಸರು ವಶಪಡಿಸಿಕೊಂಡರು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗಾಂಜಾ ವಶಪಡಿಸಿಕೊಂಡು, ಗಾಂಜಾ ಬೆಳೆಸಿದ್ದ ಚನ್ನಯ್ಯ ಅವರನ್ನು ಬಂಧಿಸಿದ್ದಾರೆ. ಸಿಪಿಐ ಅರುಣ್ ಸೋಳಂಕಿ, ಪಿಎಸ್ಐ ಚೇತನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.