ADVERTISEMENT

ತುಮಕೂರು ವಿ.ವಿಯ ಎಂ.ಎಸ್.ಸುಬ್ಬುಲಕ್ಷ್ಮಿ ಲಲಿತ ಕಲಾ ಗ್ಯಾಲರಿ ವೀಕ್ಷಣೆಗೆ ಮುಕ್ತ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2018, 9:44 IST
Last Updated 4 ಅಕ್ಟೋಬರ್ 2018, 9:44 IST
ತುಮಕೂರು ವಿವಿ ಲಲಿತಕಲಾ ವಿಭಾಗದಲ್ಲಿ ಏರ್ಪಡಿಸಿದ್ದ ಚಿತ್ರಕಲಾ ಪ್ರದರ್ಶನದ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಚಿಸಿದ ವರ್ಣಚಿತ್ರಗಳನ್ನು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್‌, ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರಿಗೆ ಪ್ರೊ.ವೈ.ಎಸ್‌.ಸಿದ್ದೇಗೌಡ ಅವರು ಸ್ಮರಣಿಕೆಯಾಗಿ ನೀಡಿದರು

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಡಾ.ಎಂ.ಎಸ್.ಸುಬ್ಬುಲಕ್ಷ್ಮಿ ಲಲಿತ ಕಲಾ ಗ್ಯಾಲರಿಯೂ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದೆ ಎಂದು ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ತಿಳಿಸಿದರು.

ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ತುಮಕೂರು ವಿವಿಯ ಭಾರತರತ್ನ ಎಂ.ಎಸ್.ಸುಬ್ಬುಲಕ್ಷ್ಮಿ ಲಲಿತ ಕಲಾ ವಿಭಾಗ ಏರ್ಪಡಿಸಿದ್ದ ವಿದ್ಯಾರ್ಥಿಗಳ ಸಾಮೂಹಿಕ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತುಮಕೂರು ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದ್ದು ಸಾಹಿತ್ಯ, ರಂಗಭೂಮಿ ಕಲೆಗಳಿಗೆ ಹೆಸರಾಗಿದೆ. ನಾಡಿನ ಸಾಂಸ್ಕೃತಿಕ ಕೇಂದ್ರವಾಗಿರುವ ತುಮಕೂರಿನ ಕಲಾವಿದರು, ಚಿತ್ರಕಲಾ ಪ್ರೇಮಿಗಳು ಹಾಗೂ ಸಹೃದಯರಿಗಾಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕಲಾ ಗ್ಯಾಲರಿಯು ಬೆಳಗ್ಗೆ 6ರಿಂದ 9 ವರೆಗೆ ಹಾಗೂ ಸಂಜೆ 5 ರಿಂದ 7ಗಂಟೆವರೆಗೆ ತೆರೆದಿರುತ್ತದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದರು.

ADVERTISEMENT

ಲಲಿತ ಕಲಾ ವಿಭಾಗದ ಮುಖ್ಯಸ್ಥ ಬಿ. ಕರಿಯಣ್ಣ ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವ ಡಾ.ಟಿ.ವಿ.ವೆಂಕಟೇಶ, ಅಧ್ಯಾಪಕ ಜಿತೇಂದ್ರ, ಹಜರತ್ ಅಲಿ, ಗ್ಯಾಲರಿಯ ನಿರ್ವಾಹಕ ಡಾ.ಎಂ.ವೈ.ರಾಜೀವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.