
ಗುಬ್ಬಿ: ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾದ 26 ಅಮಾಯಕರ ಆತ್ಮಕ್ಕೆ ಶಾಂತಿ ಕೋರಿ ಪಟ್ಟಣದ ಬಸ್ ನಿಲ್ದಾಣ ಬಳಿ ಶುಕ್ರವಾರ ಮಾಜಿ ಸೈನಿಕರು, ರೈತ ಸಂಘ ಹಾಗೂ ವಿವಿಧ ಸಂಘಟನೆಯವರು ಶ್ರದ್ಧಾಂಜಲಿ ಅರ್ಪಿಸಿದರು.
ಭಾರತದ ಆಪರೇಷನ್ ಸಿಂಧೂರ್ ಯಶಸ್ಸಿಗೆ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ತ್ರಿವರ್ಣ ಧ್ವಜ ಹಿಡಿದು ಭಾರತದ ಹಾಗೂ ಭಾರತೀಯ ಸೇನೆ ಪರ ಘೋಷಣೆ ಕೂಗಿದರು. ನೇರವಾಗಿ ಯುದ್ಧ ಮಾಡಲು ಸಾಮರ್ಥ್ಯವಿಲ್ಲದ ಪಾಕಿಸ್ತಾನ ಉಗ್ರರ ಮೂಲಕ ಭಾರತದ ಸ್ವಾಭಿಮಾನವನ್ನು ಕೆಣಕಿದೆ. ಅದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ದಾಳಿ ನಡೆಸಿರುವುದು ಸೂಕ್ತವಾಗಿದೆ. ಯುದ್ಧದ ಸಂದರ್ಭ ಬಂದಲ್ಲಿ ನಿವೃತ್ತ ಯೋಧರು ಸೈನಿಕರಿಗೆ ಬೆಂಬಲವಾಗಿ ನಿಲ್ಲಲು ಸಿದ್ಧ ಎಂದರು.
ಯುದ್ಧದ ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಅನುಸರಿಸಬೇಕಾಗಿರುವ ನಿಯಮ, ಪರಿಸ್ಥಿತಿ ನಿಭಾಯಿಸುವ ಬಗ್ಗೆ ಸಾರ್ವಜನಿಕರಲ್ಲಿ ಯೋಧರು ಅರಿವು ಮೂಡಿಸಿದರು.
ಮಾಜಿ ಸೈನಿಕರ ತಾಲ್ಲೂಕು ಘಟಕದ ಅಧ್ಯಕ್ಷ, ಪದಾಧಿಕಾರಿಗಳು, ಮಾಜಿ ಸೈನಿಕರು, ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ವಿವಿಧ ಸಂಘಟನೆ ಪದಾಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.