ADVERTISEMENT

ನಮ್ಮ ಫೋನೂ ಟ್ಯಾಪ್ ಆಗಿತ್ತು

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2019, 10:32 IST
Last Updated 21 ಆಗಸ್ಟ್ 2019, 10:32 IST
ಕೆ.ಎನ್.ರಾಜಣ್ಣ
ಕೆ.ಎನ್.ರಾಜಣ್ಣ   

ತುಮಕೂರು: ಪೋನ್ ಕದ್ದಾಲಿಕೆ ಪ್ರಕರಣ ಕುರಿತು ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ತಮ್ಮ ಫೋನ್‌ ಅನ್ನೂ ಟ್ಯಾಪ್ ಮಾಡಲಾಗಿತ್ತು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನನ್ನ ಮತ್ತು ನನ್ನ ಮಗ ರಾಜೇಂದ್ರನ ಫೋನ್‌ಗಳನ್ನು ಟ್ಯಾಪ್ ಮಾಡಲಾಗಿತ್ತು’ ಎಂದರು.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಮ್ಮ ಫೋನ್‌ಗಳನ್ನು ಕದ್ದು ಆಲಿಸಲಾಗುತ್ತಿದೆ ಎಂಬುದರ ಬಗ್ಗೆ ಗೊತ್ತಾಯಿತು. ನಂತರವೂ ಅದನ್ನು ಮುಂದುವರಿಸಲಾಗಿತ್ತು ಎಂದು ಹೇಳಿದರು.

ADVERTISEMENT

‘ಫೋನ್ ಕದ್ದು ಆಲಿಸುವುದು ಅಪರಾಧ. ಈ ರೀತಿ ಮಾಡುವುದರಿಂದ ಖಾಸಗಿತನಕ್ಕೆ ಧಕ್ಕೆ ಆಗುತ್ತದೆ. ಈ ಕದ್ದಾಲಿಕೆಯ ಕೃತ್ಯಗಳು ಅಂತ್ಯ ಆಗಬೇಕಾದರೆ ಸಿಬಿಐ ತನಿಖೆ ಮಾಡಲೇಬೇಕು’ ಎಂದು ಒತ್ತಾಯಿಸಿದರು.

ಎಚ್.ಡಿ.ಕುಮಾರಸ್ವಾಮಿ ಅಂಥವರು ಮುಖ್ಯಮಂತ್ರಿಯಾಗಿದ್ದು ದುರ್ದೈವ. ಮೂರು ಬಿಟ್ಟವರು ಊರಿಗೆ ದೊಡ್ಡವರು ಎಂದು ಹೇಳುತ್ತಾರಲ್ಲ. ಅ ರೀತಿ ಅವರು ಮಾತನಾಡುತ್ತಾರೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.