ADVERTISEMENT

ತಿಪಟೂರು: ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 17 ಮೇ 2025, 13:14 IST
Last Updated 17 ಮೇ 2025, 13:14 IST
ತಿಪಟೂರು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ನಡೆಯಿತು
ತಿಪಟೂರು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ನಡೆಯಿತು   

ತಿಪಟೂರು: ಸರ್ಕಾರಗಳು ಒಳ್ಳೆಯ ಯೋಜನೆಗಳನ್ನು ಜಾರಿ ಮಾಡಿದಾಗ ಅವುಗಳನ್ನು ಅನುಷ್ಠಾನ ಮಾಡಿ ಮಕ್ಕಳ ಭವಿಷ್ಯಕ್ಕೆ ಅನುಕೂಲವಾಗುವಂತೆ ಉತ್ತಮ ಶಿಕ್ಷಣ ನೀಡಿದಾಗ ತಾಲ್ಲೂಕಿನ ಸರ್ವಾಂಗಿಣ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಕೆ.ಷಡಕ್ಷರಿ ಹೇಳಿದರು.

ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಿಂದ ನಡೆದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಾಲೆಯಲ್ಲಿ ಶಿಕ್ಷಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಆವರಣದಲ್ಲಿ ಗಿಡ ಮರಗಳನ್ನು ನೆಟ್ಟು ಪರಿಸರದ ಕಡೆ ಗಮನ ಹರಿಸಿ, ಮಕ್ಕಳಿಗೆ ಕಲಿಕಾ ವಾತಾವರಣ ಸೃಷ್ಟಿಸಬೇಕು. ಸಮಯ ಪಾಲನೆ ಮಾಡಬೇಕು ಎಂದರು.

ADVERTISEMENT

ಸರ್ಕಾರಿ ಶಾಲೆಗಳ ದಾಖಾಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಸಮುದಾಯ ಸಹಕಾರ ಮಹತ್ವದ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಚಂದ್ರಯ್ಯ, ನಗರಸಬೆ ಅಧ್ಯಕ್ಷೆ ಯಮುನಾ ಧರಣೇಶ್, ಪ್ರಾಂಶುಪಾಲ ಶಿವಕುಮಾರ್, ಕ್ಷೇತ್ರ ಸಂಪನ್ಮೂಲ ಸಮನ್ವಯಧಿಕಾರಿ ಉಮೇಶ್‌ಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಜಿ.ಆರ್.ಜಯರಾಮ್, ಪ್ರೌಢಶಾಲಾ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಚನ್ನೇಗೌಡ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಿವಶಂಕರ್, ಅಜೀಂ ಪ್ರೇಮ್‌ಜಿ ಪೌಂಢಷೇನ್‌ ಪ್ರತಿನಿಧಿ ಈಶ್ವರ್ ನಾಯ್ಕ, ಬಿಆರ್‌ಪಿ, ಸಿಆರ್‌ಪಿ, ಪೋಷಕರು, ಶಿಕ್ಷಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.