ADVERTISEMENT

ಸ್ಥಳೀಯ ಸಂಸ್ಥೆ ಚುನಾವಣೆ: ಕರಡು ಮತದಾರರ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2018, 13:31 IST
Last Updated 10 ಡಿಸೆಂಬರ್ 2018, 13:31 IST

ತುಮಕೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2019ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ತಿಪಟೂರು, ಶಿರಾ ನಗರಸಭೆ, ಕುಣಿಗಲ್, ಪಾವಗಡ ಪುರಸಭೆ, ತುರುವೇಕೆರೆ ಪಟ್ಟಣ ಪಂಚಾಯಿತಿ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಗಳನ್ನು ತಹಶೀಲ್ದಾರ್ ಕಚೇರಿ, ಸ್ಥಳೀಯ ಸಂಸ್ಥೆಗಳಲ್ಲಿ ಪ್ರಕಟಿಸಲಾಗಿದೆ.

ಮತದಾರರು ತಾವು ವಾಸವಿರುವ ವಾರ್ಡಿನ ವ್ಯಾಪ್ತಿಯಲ್ಲಿ ಇರದೆ ಬೇರೆ ವಾರ್ಡಿನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದರೆ, ಗ್ರಾಮೀಣ ಮತದಾರರ ಹೆಸರನ್ನು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಹೆಸರುಗಳನ್ನು ಈ ಮತದಾರರ ಪಟ್ಟಿಯಲ್ಲಿ ಸೇರಿಸಿದ್ದರೆ ಮಾತ್ರ ಆಕ್ಷೇಪಣೆ ಸಲ್ಲಿಸಬಹುದು.

ಆಕ್ಷೇಪಣೆಗಳನ್ನು ಡಿ.15ರ ಒಳಗೆ ಸಲ್ಲಿಸಬೇಕು. ಆಕ್ಷೇಪಣೆಗಳನ್ನು ಪರಿಶೀಲಿಸಿ ಡಿ.20ರ ಒಳಗೆ ಇತ್ಯರ್ಥಪಡಿಸಲಾಗುವುದು. ಅಗತ್ಯವಿದ್ದಲ್ಲಿ ಸೂಕ್ತ ಬದಲಾವಣೆ ಮಾಡಿ ಡಿ.26ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.