ADVERTISEMENT

ಬೇರು ಮಟ್ಟದಿಂದ ಪಕ್ಷ ಸಂಘಟನೆ: ನಿಖಿಲ್ ಕುಮಾರಸ್ವಾಮಿ

ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 4:22 IST
Last Updated 18 ಜೂನ್ 2025, 4:22 IST
ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣದಲ್ಲಿ ಮಂಗಳವಾರ ಜನರೊಂದಿಗೆ ಜನತಾದಳ ಕಾರ್ಯಕ್ರಮವನ್ನು ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿದರು
ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣದಲ್ಲಿ ಮಂಗಳವಾರ ಜನರೊಂದಿಗೆ ಜನತಾದಳ ಕಾರ್ಯಕ್ರಮವನ್ನು ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿದರು   

ಶಿರಾ: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬೇರು ಮಟ್ಟದಿಂದ ಪಕ್ಷ ಸಂಘಟಿಸಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.‌

ತಾಲ್ಲೂಕಿನ ಬುಕ್ಕಾಪಟ್ಟಣದಲ್ಲಿ ಮಂಗಳವಾರ ನಡೆದ ಜನರೊಂದಿಗೆ ಜನತಾದಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಜನತೆ ಕಾಂಗ್ರೆಸ್ ಆಡಳಿತದಿಂದ ರೋಸಿ ಹೋಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲಾಗುತ್ತಿದೆ ಎಂದರು.‌

ADVERTISEMENT

ಶಾಸಕ ಸಿ.ಬಿ.ಸುರೇಶ್ ಬಾಬು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಅವರು ಸಚಿವರಾಗಬೇಕು ಎನ್ನುವ ಬಯಕೆ ನಿಮಗೆ ಇದೆ. 2028ಕ್ಕೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದ್ದು ಆಗ ಸುರೇಶ್ ಬಾಬು ಖಂಡಿತವಾಗಿ ಸಚಿವರಾಗಿ ಇನ್ನೂ ಉತ್ತಮ ಕೆಲಸ ಮಾಡಲಿದ್ದಾರೆ ಎಂದರು.‌

‘ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿ, ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ತರಲು ಪೂರಕವಾಗಿ ಕೆಲಸ ಮಾಡಲಾಗುತ್ತಿದೆ. ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ. ತುಮಕೂರು ಜೆಡಿಎಸ್ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಖಾತರಿಪಡಿಸುವ ಜವಾಬ್ದಾರಿ ನಮ್ಮ ಮೇಲಿದೆ. ಆ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು’ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಜೆಡಿಎಸ್ ರಾಜ್ಯ ಸಮಿತಿ ಅಧ್ಯಕ್ಷ ಆರ್.ಉಗ್ರೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಸಿಂಗದಳ್ಳಿ ರಾಜಕುಮಾರ್, ಶಾಂತಕುಮಾರ್, ಹೊಸ ಪಾಳ್ಯ ಸತ್ಯನಾರಾಯಣ, ಮುದ್ದು ಗಣೇಶ್ ಹಾಜರಿದ್ದರು.

ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ ಮಂಗಳವಾರ ನಡೆದ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶಾಸಕ ಸಿ.ಬಿ.ಸುರೇಶ್ ಬಾಬು ಆರ್.ಉಗ್ರೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.