ಕೊರಟಗೆರೆ: ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಯಿತು.
ತಹಶೀಲ್ದಾರ್ ಕೆ.ಮಂಜುನಾಥ್ ಧ್ವಜಾರೋಹಣ ನೆರವೇರಿಸಿ ಪೊಲೀಸ್ ಸಿಬ್ಬಂದಿ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಧ್ವಜ ವಂದನೆ ಸ್ವೀಕರಿಸಿದರು.
ನಂತರ ಮಾತನಾಡಿದ ಅವರು, ದೇಶ, ಭಾಷೆಗೆ ಧಕ್ಕೆಯಾಗುವ ಸಂದರ್ಭ ಬಂದಾಗ ಎಲ್ಲರೂ ಸ್ವಾಭಿಮಾನದಿಂದ ಹೋರಾಡಬೇಕು ಎಂದರು.
ಸಮಾಜದ ವಿವಿಧ ಕ್ಷೇತ್ರಗಳ ಸಾಧಕರುನ್ನು ಸತ್ಕರಿಸಲಾಯಿತು. ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು.
ಪ.ಪಂ. ಅಧ್ಯಕ್ಷೆ ಅನಿತಾ, ಉಪಾಧ್ಯಕ್ಷೆ ಹುಸ್ನಾಫಾರಿಯಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ, ಸದಸ್ಯರು, ಮುಖ್ಯಧಿಕಾರಿ ಕೆ.ಎಸ್.ಉಮೇಶ್, ಕಸಪಾ ಅಧ್ಯಕ್ಷ ಕೆ.ಎಸ್.ಈರಣ್ಣ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಎಂ.ರುದ್ರೇಶ್, ಎಸ್ಸಿಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಲಕ್ಷ್ಮಿಪುತ್ರ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಎನ್.ಚಿಕ್ಕರಂಗಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಸಿ.ಅನಂತರಾಮು, ಬಿಇಒ ಫೈರೋಜ್ ಬೇಗಮ್, ಸಿಪಿಐ ಆರ್.ಪಿ.ಅನಿಲ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.