ಪಾವಗಡ: ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪಿ ಇದುವರೆಗೆ ಬಂಧಿಸಿಲ್ಲ ಎಂದು ಆರೋಪಿಸಿ ವಕೀಲರ ಸಂಘದ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಯಿತು.
ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದು ನ್ಯಾಯಾಲಯದ ಬಳಿಯಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಕೂಡಲೇ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಗ್ರೇಡ್ 2 ತಹಶಿಲ್ದಾರ್ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು.
ದವಡಬೆಟ್ಟ ಗ್ರಾಮದಲ್ಲಿ ಮಂಗಳವಾರ ನೋಟಿಸ್ ನೀಡಿದ್ದಕ್ಕಾಗಿ ವಕೀಲ ಸುಧಾಕರ್ ಮೇಲೆ 15ಕ್ಕೂ ಹೆಚ್ಚಿನವರು ಕೋಲು, ಕಲ್ಲಿನಿಂದ ಹಲ್ಲೆ ನಡೆಸಿದ್ದರು. ಹಲ್ಲೆಗೀಡಾದ ವಕೀಲ ತೀವ್ರ ಅಸ್ವಸ್ಥರಾಗಿದ್ದಾರೆ. ಹಲ್ಲೆ ನಡೆಸಿದವರನ್ನು ಬಂಧಿಸಬೇಕು. ವಕೀಲ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣ ರದ್ದುಪಡಿಸಬೇಕು ಎಂದು ಪ್ರತಿಭಟನಾನಿರತ ವಕೀಲರು ಒತ್ತಾಯಿಸಿದರು.
ವಕೀಲರ ಸಂಘದ ಪದಾಧಿಕಾರಿಗಳು, ವಕೀಲರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.