ADVERTISEMENT

ಪಾವಗಡ ಬಸ್ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 8:33 IST
Last Updated 20 ಮಾರ್ಚ್ 2022, 8:33 IST
ತುಮಕೂರು ಜಿಲ್ಲಾ ಆಸ್ಪತ್ರೆಗೆ ಭಾನುವಾರ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
ತುಮಕೂರು ಜಿಲ್ಲಾ ಆಸ್ಪತ್ರೆಗೆ ಭಾನುವಾರ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.   

ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಭಾನುವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ನಡೆದ ಖಾಸಗಿ ಬಸ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.

ಸರ್ಕಾರ ನಿಮ್ಮೊಂದಿಗೆ ಇದೆ. ಯಾವುದೇ ರೀತಿಯ ಭಯಪಡಬೇಡಿ. ಎಲ್ಲ ರೀತಿಯ ಚಿಕಿತ್ಸೆ ನೀಡಲಾಗುವುದು ಎಂದು ಗಾಯಾಳುಗಳಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದರು.

ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಕೆ. ಶಹಪೂರವಾಡ್, ಡಿಎಚ್‌ಒ ಡಾ‌.ನಾಗೇಂದ್ರಪ್ಪ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.