ADVERTISEMENT

ಪಾವಗಡ: ವಕೀಲನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 4:53 IST
Last Updated 29 ಆಗಸ್ಟ್ 2025, 4:53 IST
ಪಾವಗಡದಲ್ಲಿ ಗುರುವಾರ ವಕೀಲ ಸುಧಾಕರ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು 
ಪಾವಗಡದಲ್ಲಿ ಗುರುವಾರ ವಕೀಲ ಸುಧಾಕರ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು    

ಪಾವಗಡ: ವಕೀಲ ಸುಧಾಕರ್ ಮೇಲೆ ಹಲ್ಲೆ ಮಾಡಿದ ಎಲ್ಲ ಆರೋಪಿಗಳನ್ನು ಬಂಧಿಸಿಲ್ಲ. ಹಲ್ಲೆ ಮಾಡಿಸಿಕೊಂಡಿರುವ ವಕೀಲರ ವಿರುದ್ಧವೇ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ವಕೀಲರ ಸಂಘದ ನೇತೃತ್ವದಲ್ಲಿ ಗುರುವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.

ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದು ಶನೈಶ್ಚರ ವೃತ್ತದವರೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಂತರ ತಹಶೀಲ್ದಾರ್ ಕಚೇರಿ ಮುಂಭಾಗ ಕೆಲಕಾಲ ರಸ್ತೆ ತಡೆ ನಡೆಸಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ವರದರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

ಹಲ್ಲೆಗೆ ಒಳಗಾದ ವಕೀಲ ತೀವ್ರ ಅಸ್ವಸ್ಥರಾಗಿದ್ದು, ತುಮಕೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಕೀಲನ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣ ರದ್ದುಪಡಿಸಬೇಕು ಎಂದು ಒತ್ತಾಯಿಸಲಾಯಿತು.

ADVERTISEMENT

ವಕೀಲರ ಸಂಘದ ಪದಾಧಿಕಾರಿಗಳು, ವಕೀಲರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.