ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಪಾವಗಡ: ತಾಲ್ಲೂಕಿನ ಕಡಪಲ ಕೆರೆ ಗ್ರಾಮದಲ್ಲಿ ಶನಿವಾರ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ, ತಾಯಿ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಸರಿತಾ (25) ಎಂದು ಗುರುತಿಸಲಾಗಿದೆ. 18 ತಿಂಗಳ ಹೆಣ್ಣು ಮಗು, 4 ವರ್ಷದ ಗಂಡು ಮಗುವನ್ನು ಹತ್ಯೆ ಮಾಡಲಾಗಿದೆ. ನಂತರ ಮಹಿಳೆಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಒಂದು ಮಗುವಿನ ಕತ್ತನ್ನು ಸೀಳಲಾಗಿದೆ, ಮತ್ತೊಂದು ಮಗುವನ್ನು ಉಸಿರುಗಟ್ಟಿಸಿ ಕೊಲ್ಲಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.