ADVERTISEMENT

ಪತ್ನಿ ಕೊಂದ ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 14:47 IST
Last Updated 28 ಏಪ್ರಿಲ್ 2025, 14:47 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ಪಾವಗಡ: ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಅಪರಾಧಿಗೆ ಮಧುಗಿರಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ, ₹1ಲಕ್ಷ ದಂಡ ವಿಧಿಸಿದೆ.

ಪಟ್ಟಣದ ನಿರೀಕ್ಷಣಾ ಮಂದಿರ ಮುಂಭಾಗ ಮಾರ್ಚ್ 23, 2023ರಂದು ಪತ್ನಿ ಕವಿತಾ ಅವರನ್ನು ತಾಲ್ಲೂಕಿನ ವೆಂಕಟಾಪುರ ಗ್ರಾಮದ ಆರೋಪಿ ಬಾಲಾಜಿ ಮಚ್ಚಿನಿಂದ ಹತ್ಯೆ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ADVERTISEMENT

ಪೊಲೀಸ್ ಸರ್ಕಲ್ ಇನ್ ಸ್ಪೆಕ್ಟರ್ ವೆಂಕಟೇಶ್ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಧುಗಿರಿ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸೆಷನ್‌ ನ್ಯಾಯಾಲಯದ ನ್ಯಾಯಾಧೀಶ ಯಾದವ ಕರಕೆರೆ ತೀರ್ಪು ಪ್ರಕಟಿಸಿದರು. ಸರ್ಕಾರದ ಪರ ಸರ್ಕಾರಿ ವಕೀಲ ಬಿ.ಎ ನಿರಂಜನಮೂರ್ತಿ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.