ADVERTISEMENT

ಪಾವಗಡ: ಭ್ರೂಣಲಿಂಗ ಪತ್ತೆಯಿಂದ ಅಸಮತೋಲನ– ಡಿ.ಜೆ ಸುನಿತಾ

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 4:27 IST
Last Updated 1 ಜನವರಿ 2026, 4:27 IST
ಪಾವಗಡದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮ
ಪಾವಗಡದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮ   

ಪಾವಗಡ: ಲಿಂಗಾನುಪಾತದಲ್ಲಿ ಸಮತೋಲನ ಸಾಧಿಸುವುದೇ ಭ್ರೂಣ ಲಿಂಗ ಪತ್ತೆ ತಡೆ ಕಾಯ್ದೆಯ ಮೂಲ ಉದ್ದೇಶ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಿ.ಜೆ ಸುನಿತಾ ತಿಳಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬುಧವಾರ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮ, ಪಿಸಿಪಿಎನ್‌ಡಿಟಿ ಕಾಯ್ದೆ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಭ್ರೂಣ ಲಿಂಗ ಪತ್ತೆ ಮಾಡುವುದು, ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕಾಯ್ದೆಯ ಪ್ರಕಾರ ತಪ್ಪು. ಇಂತಹ ಅಪರಾಧಗಳಿಗೆ ಕಠಿಣ ಶಿಕ್ಷೆ ಇದೆ. ಲಿಂಗಾನುಪಾತ ಅಪಾಯಕಾರಿ ಮಟ್ಟ ತಲುಪಿದೆ. ಹೆಣ್ಣು ಮಗು ಬೇಡ ಎನ್ನುವವರು ಹೆಣ್ಣು ಭ್ರೂಣ ಹತ್ಯೆ ಮಾಡುವ ತಪ್ಪು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ADVERTISEMENT

ಕಾಲ ಕಾಲಕ್ಕೆ ಬದಲಾಗುವ ತಂತ್ರಜ್ಞಾನವನ್ನು ಇಂತಹ ದುಷ್ಕೃತ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಇಂತಹ ಕೃತ್ಯಗಳ ಬಗ್ಗೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕು ಎಂದರು.

ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಭೇಟಿ ಬಚಾವೋ ಬೇಟಿ ಪಡಾವೋ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.

ಜಿಲ್ಲಾ ಸಂಪನ್ಮೂಲ ಕೇಂದ್ರದ ಸಂಯೋಜಕ ಶಶಿಧರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣಪ್ಪ, ರಘುವೀರಪ್ಪ, ಕರಿಯಣ್ಣ, ಸಾಂತ್ವನ ಕೇಂದ್ರದ ಅನಿತಾ, ಜಯಮ್ಮ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.