ADVERTISEMENT

ತಿಪಟೂರು | ₹5 ಸಾವಿರ ಲಂಚಕ್ಕೆ ಬೇಡಿಕೆ; ಪಿಡಿಒ ಲೋಕಾಯುಕ್ತ ಬಲೆಗೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 13:14 IST
Last Updated 13 ಜೂನ್ 2024, 13:14 IST
   

ತಿಪಟೂರು: ತಾಲ್ಲೂಕಿನ ಮಸವಣಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರಶುರಾಮ್ ರಾಮಪುರ ₹5,500 ಲಂಚ ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ನೊಣವಿನಕೆರೆಯ ಎನ್‌.ಉಮೇಶ್ ರಾಜಶೆಟ್ಟಿಹಳ್ಳಿ ಎಂಬುವರಿಗೆ ನಿವೇಶನದ ಇ–ಸ್ವತ್ತು ಮಾಡಿಕೊಡಲು ₹11 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಗುರುವಾರ ₹5,500 ಲಂಚ ತೆಗೆದುಕೊಳ್ಳುವಾಗ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ಬಿ‌.ಉಮಾಶಂಕರ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.