ADVERTISEMENT

ಪಿಡಿಒಗಳ ಪ್ರತಿಭಟನೆ ನಾಳೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2020, 16:17 IST
Last Updated 13 ಸೆಪ್ಟೆಂಬರ್ 2020, 16:17 IST

ತುಮಕೂರು: ವಸತಿ ಸಚಿವ ವಿ.ಸೋಮಣ್ಣ ಪಿಡಿಒಗಳ ವಿರುದ್ಧ ಹೇಳಿಕೆ ನೀಡಿದ್ದು ಇದನ್ನು ಖಂಡಿಸಿ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪಿಡಿಒಗಳು ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಸೋಮವಾರ (ಸೆ.14) ಬೆಳಿಗ್ಗೆ 11ಕ್ಕೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ವಿ.ಸೋಮಣ್ಣ ಸೆ.11 ರಂದು ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ‘ಪಿಡಿಒಗಳು ರಾಕ್ಷಸರು’ ಎಂದು ಹೇಳಿದ್ದಾರೆ. ಇಂತಹ ಹೇಳಿಕೆಗಳಿಂದ ಅಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗುತ್ತಿದೆ. ವಸತಿ ಸಚಿವರು ತಮ್ಮ ಹೇಳಿಕೆ ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT