ADVERTISEMENT

ಕಾರು ಡಿಕ್ಕಿ: ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 4:01 IST
Last Updated 27 ಅಕ್ಟೋಬರ್ 2020, 4:01 IST

ಮಧುಗಿರಿ: ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದಬ್ಬೇಘಟ್ಟ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಗ್ರಾಮದ ಕಾಟಯ್ಯ ಎಂಬುವರ ಪುತ್ರ ನಾಗರಾಜು (20) ಮೃತಪಟ್ಟವರು. ನಾಗರಾಜು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಬಡವನಹಳ್ಳಿ ಪೊಲೀಸ್ ಠಾಣೆಯ ಪಿ.ಐ. ಹನುಮಂತರಾಯಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT