ADVERTISEMENT

ತುಮಕೂರು | ಬೈಕ್‌ ಡಿಕ್ಕಿ ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 10 ಮೇ 2022, 4:50 IST
Last Updated 10 ಮೇ 2022, 4:50 IST

ಚಿಕ್ಕನಾಯಕನಹಳ್ಳಿ: ಪಟ್ಟಣದ ಬಿ.ಎಚ್. ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಹಿಂಬದಿಯಿಂದ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಪಟ್ಟಣದ ಕಾಳಮ್ಮನಗುಡಿ ಬೀದಿ ನಿವಾಸಿ ರೇಣುಕಯ್ಯ (44) ಮೃತಪಟ್ಟವರು.

ಮೃತರು ವೃತ್ತಿಯಲ್ಲಿ ಟ್ರ್ಯಾಕ್ಟರ್‌ ಚಾಲಕರಾಗಿದ್ದಾರೆ. ಭಾನುವಾರ ರಾತ್ರಿ ಬಸ್‌ ನಿಲ್ದಾಣಕ್ಕೆ ಹೋಗಿ ಹಿಂತಿರುಗಿ ಮನೆಗೆ ವಾಪಸ್‌ ಬರುವಾಗ ಈ ಅವಘಡ ಸಂಭವಿಸಿದೆ.

ADVERTISEMENT

ಬೈಕ್‌ ಚಾಲಕನ ಅಜಾಗರೂಕ ಚಾಲನೆಯಿಂದ ನನ್ನ ಪತಿ ಸಾವನ್ನಪ್ಪಿದ್ದಾರೆ ಎಂದು ಮೃತರ ಪತ್ನಿ ಪ್ರೇಮಲತಾ ಇಲ್ಲಿನ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.