ADVERTISEMENT

ತುಮಕೂರು: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ದಂಡ

ಮಾಸ್ಕ್ ದಿನದ ಜಾಥಾದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 8:22 IST
Last Updated 19 ಜೂನ್ 2020, 8:22 IST
ಮಾಸ್ಕ್ ದಿನಾಚರಣೆ ಜಾಥಾದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಎಸ್‌ಪಿ ಡಾ.ಕೆ.ವಂಶಿಕೃಷ್ಣ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು
ಮಾಸ್ಕ್ ದಿನಾಚರಣೆ ಜಾಥಾದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಎಸ್‌ಪಿ ಡಾ.ಕೆ.ವಂಶಿಕೃಷ್ಣ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು   

ತುಮಕೂರು: ಸಾರ್ವಜನಿಕ ಸ್ಥಳಗಳಲ್ಲಿ ಯಾರು ಮಾಸ್ಕ್ ಧರಿಸುವುದಿಲ್ಲವೋ ಅಂತಹವರಿಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಎಚ್ಚರಿಕೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾಸ್ಕ್‌ ದಿನದ ಜಾಥಾದಲ್ಲಿ ಮಾತನಾಡಿದರು.

ಮಾಸ್ಕ್ ಧರಿಸುವುದರಿಂದ ಕೊರೊನಾ ನಿಯಂತ್ರಿಸಬಹುದು. ಈ ಉದ್ದೇಶದಿಂದ ರಾಜ್ಯ ಸರ್ಕಾರದ ಆದೇಶದಂತೆ ಮಾಸ್ಕ್ ದಿನ ಆಚರಿಸಲಾಗುತ್ತಿದೆ. ಜನರು ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸಲಹೆ ಮಾಡಿದರು.

ADVERTISEMENT

ಶಾಸಕ ಜಿ.ಬಿ.ಜ್ಯೋತಿ ಗಣೇಶ್, ‘ಮಾಸ್ಕ್ ಧರಿಸುವ ಬಗ್ಗೆ ಸರ್ಕಾರ ಮೊದಲಿನಿಂದಲೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದೆ. ಕೊರೊನಾ ತಡೆ ನಿಟ್ಟಿನಲ್ಲಿ ಮಾಸ್ಕ್ ದಿನಾಚರಣೆ ಜತೆಗೆ ಜಾಥಾ ಮೂಲಕ ಅರಿವು ಮೂಡಿಸಲಾಗುತ್ತಿದೆ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಡಾ.ಕೆ.ವಂಶಿಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನ ಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ತಹಶೀಲ್ದಾರ್ ಮೋಹನ್‍ ಕಿಮಾರ್, ಡಾ.ನಾಗೇಂದ್ರಪ್ಪ,
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.