ADVERTISEMENT

ಕೆರೆ ಮಣ್ಣು ತೆಗೆಯಲು ಅನುಮತಿ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 17 ಮೇ 2024, 7:20 IST
Last Updated 17 ಮೇ 2024, 7:20 IST

ತುಮಕೂರು: ರೈತರು ತಮ್ಮ ಜಮೀನಿಗಾಗಿ ಕೆರೆಗಳಿಂದ ಮಣ್ಣು ತೆಗೆಯುವ ಮುನ್ನ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗೆ ಮಾಹಿತಿ ಪತ್ರ ಸಲ್ಲಿಸಿ, ಅನುಮತಿ ಪಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಕೆರೆಗಳ ಹೂಳು ತೆಗೆಯುವ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ತಹಶೀಲ್ದಾರ್‌, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದರು.

ರೈತರ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಕೆರೆಯ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಮಣ್ಣು ತೆಗೆಯಬೇಕು. ಕೆರೆಯ ಏರಿಯ ತಳ ಭಾಗದಿಂದ 10 ಮೀಟರ್ ಅಂತರ ಕಾಯ್ದಿರಿಸಬೇಕು. ಕೆರೆಯ ಮೇಲ್ಮೈ ಭಾಗದಲ್ಲಿ 3 ಅಡಿ ಮಾತ್ರ ಹೂಳು ತೆಗೆಯಲು ಅವಕಾಶ ನೀಡಬೇಕು ಎಂದು ಸೂಚಿಸಿದರು.

ADVERTISEMENT

ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ನರೇಗಾ ಯೋಜನೆಯಡಿ ಈಗಾಗಲೇ ಅಮೃತ ಸರೋವರ ಕಾಮಗಾರಿಗಳು ನಡೆಯುತ್ತಿವೆ. ಕೆರೆ ಅಭಿವೃದ್ಧಿ, ಹೂಳು ತೆಗೆಯುವುದು, ಹಸಿರೀಕರಣ, ಕಾಲುವೆಗಳ ಅಭಿವೃದ್ಧಿ ಮಾಡಲು ಅವಕಾಶ ಕಲ್ಪಿಸಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.