ADVERTISEMENT

ಪಿಎಫ್ ಐ ಅಧ್ಯಕ್ಷ ಪೊಲೀಸರ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 8:52 IST
Last Updated 27 ಸೆಪ್ಟೆಂಬರ್ 2022, 8:52 IST
   

ತುಮಕೂರು: ಪಿಎಫ್ ಐ ಜಿಲ್ಲಾ ಘಟಕದ ಅಧ್ಯಕ್ಷ ರಿಯಾನ್ ಖಾನ್ ಅವರನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ನಗರದ ಸದಾಶಿವ ನಗರದ ರಿಯಾನ್ ಖಾನ್ ಮನೆಯ ಮೇಲೆ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಕೆ.ಶಹಪೂರವಾಡ್ ನೇತೃತ್ವದಲ್ಲಿ ದಾಳಿ‌ ನಡೆಯಿತು.

ವಶಕ್ಕೆ ಪಡೆದು ತುಮಕೂರು ತಹಶೀಲ್ದಾರ್ ಎದುರು ವಿಚಾರಣೆಗೆ ಹಾಜರುಪಡಿಸಿದ್ದರು. ಅ.2 ರವರೆಗೆ ಹೆಚ್ಚಿನ ವಿಚಾರಣೆಗೆ ಪೊಲೀಸರ ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT