ADVERTISEMENT

ವಿ.ರೂಪಾಗೆ ಪಿಎಚ್‌.ಡಿ ಪದವಿ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2019, 15:54 IST
Last Updated 21 ಏಪ್ರಿಲ್ 2019, 15:54 IST
ವಿ.ರೂಪಾ
ವಿ.ರೂಪಾ   

ತುಮಕೂರು: ತುಮಕೂರು ಬಟವಾಡಿ ನಿವಾಸಿಯಾದ ವಿ.ರೂಪಾ ಅವರು ‘ಭೌತ ವಿಜ್ಞಾನ’ ವಿಷಯಕ್ಕೆ ಸಂಬಂಧಿಸಿದಂತೆ ಮಂಡಿಸಿದ ಮಹಾಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯ ಪಿಎಚ್‌.ಡಿ.ಪದವಿಯನ್ನು ನೀಡಿದೆ. ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್‌.ಆನಂದಕುಮಾರಿ ಅವರ ಮಾರ್ಗದರ್ಶನ ಪಡೆದಿದ್ದಾರೆ.

ರೂಪಾ ಅವರು ಸಿದ್ಧಗಂಗಾ ಬಾಲಕಿಯರ ಪದವಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿದ್ದು, ಪ್ರಸ್ತುತ ಬೆಂಗಳೂರಿನ ಎಎಂಸಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸಹಾಯಕ ಪ್ರಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT