ADVERTISEMENT

ಪಾವಗಡ | ಪೈಪ್‌ಲೈನ್ ಹಾಳು: ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2025, 14:43 IST
Last Updated 17 ಮಾರ್ಚ್ 2025, 14:43 IST
ಪಾವಗಡ ತಾಲ್ಲೂಕು ಕೆ.ರಾಮಪುರ ಬಳಿ ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲಿಸಿದರು
ಪಾವಗಡ ತಾಲ್ಲೂಕು ಕೆ.ರಾಮಪುರ ಬಳಿ ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲಿಸಿದರು   

ಪಾವಗಡ: ತುಂಗಭದ್ರಾ ಕುಡಿಯುವ ನೀರಿನ ಯೋಜನೆಯ ಪೈಪ್‌ಲೈನ್ ಹಾಳು ಮಾಡಿರುವವರಿಗೆ ಕೂಡಲೆ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾನುವಾರ ತಾಲ್ಲೂಕಿನ ನಾಗಲಮಡಿಕೆ ಕ್ರಾಸ್ ಬಳಿಯ ತುಂಗಭದ್ರಾ ಕುಡಿಯುವ ನೀರಿನ ಯೋಜನೆ ಪರಿಶೀಲಿಸಿದ ಅವರು, ಪೈಪ್‌ಲೈನ್‌ನಲ್ಲಿ ಸೋರಿಕೆಯಾಗುತ್ತಿರುವುದನ್ನು ಗಮನಿಸಿ ಕೂಡಲೆ ಸರಿಪಡಿಸಿ ಎಂದು ಸೂಚಿಸಿದರು. ಪೈಪ್‌ಲೈನ್ ಒಡೆದು ಹಾಕಿರುವವರಿಗೆ ತಕ್ಷಣವೇ ನೋಟಿಸ್ ನೀಡಬೇಕು. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಜನತೆಗೆ ಶುದ್ಧ ಕುಡಿಯುವ ನೀರು ಮನೆ ಮನೆಗೆ ಪೂರೈಕೆ ಮಾಡುವ ನಿಟ್ಟಿನಲ್ಲಿ ತುಂಗಭದ್ರಾ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ADVERTISEMENT

ಬಿಸಿಲು ಹೆಚ್ಚುತ್ತಿರುವ ಕಾರಣ ಬೆಳಗ್ಗೆ 6ರಿಂದಲೇ ಪಡಿತರ ವಿತರಿಸಬೇಕು ಎಂದು ಸೂಚಿಸಿದರು.

ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಡಿ.ಎನ್ ವರದರಾಜು, ಶಿರಿನ್ ತಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್, ದಿನೇಶ್, ಕಂದಾಯ ನಿರೀಕ್ಷಕ ಕಿರಣ್ ಕುಮಾರ್, ಸಿಡಿಪಿಒ ಸುನಿತಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.